ಉಡುಪಿ: ಸಿಐಟಿಯು 51ನೇ ವರ್ಷಾಚರಣೆ ಅಂಗವಾಗಿ ಭಾನುವಾರ ಇಲ್ಲಿನ ಸಿಐಟಿಯು ಕಚೇರಿ ಎದುರು ಧ್ವಜಾರೋಹಣ ಮಾಡಲಾಯಿತು.
ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.
ಸಿಐಟಿಯು ಉಡುಪಿ ಜಿಲ್ಲಾ ಖಜಾಂಚಿ ಶಶಿಧರ್ ಗೊಲ್ಲ, ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷ ಶೇಖರ್ ಬಂಗೇರ, ಸಿಐಟಿಯು ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್ ಎಸ್., ವಿದ್ಯಾ ರಾಜ್, ಕಟ್ಟಡ ನೌಕರರ ಸಂಘದ ಗೌರವಾಧ್ಯಕ್ಷ ದಯಾನಂದ ಕೋಟ್ಯಾನ್, ಸಂಜೀವ ಮೊದಲಾದವರಿದ್ದರು