Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಸೇವೆ ಮೂಲಕ ಸಂಭ್ರಮಾಚರಣೆ

ಸೇವೆ ಮೂಲಕ ಸಂಭ್ರಮಾಚರಣೆ

ಉಡುಪಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ವರ್ಷ ಪೂರೈಸಿದ ಸಂದರ್ಭದಲ್ಲಿ ಬಿಜೆಪಿ ಸೇವೆ ಮೂಲಕ ಸಂಭ್ರಮಾಚರಣೆ ನಡೆಸಿದೆ.

ಸೇವಾ ಹಿ ಸಂಘಟನೆ ಕಾರ್ಯಕ್ರಮದಂಗವಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ಬಿ.ಜೆ.ಪಿ. ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಕೊರೊನಾ ವಾರಿಯರ್ ಗಳಿಗೆ ಮಾಸ್ಕ್, ಸ್ಯಾನಿಟೈಸರ್, ಆಕ್ಸಿ ಮೀಟರ್, ಕಷಾಯ, ಆಹಾರ ಕಿಟ್ ಹಾಗೂ ಕೊರೊನಾ ಜಾಗೃತಿ ಮೂಡಿಸುವ ಹಲವಾರು ಕಾರ್ಯಕ್ರಮ ನಡೆಸಿತು.

ಎಲ್ಲಾ ಜನಪ್ರತಿನಿಧಿಗಳು ಹಾಗೂ ಪಕ್ಷ ಪ್ರಮುಖರಿಗೆ ಒಂದೊಂದು ಗ್ರಾಮದ ಜವಾಬ್ದಾರಿ ನೀಡಲಾಗಿತ್ತು.

ಭಾನುವಾರ ದಿನವಿಡೀ ಆ ಗ್ರಾಮದಲ್ಲಿದ್ದು ಕಾರ್ಯಕರ್ತರೊಂದಿಗೆ ಕೈಜೋಡಿಸಿ ಯಶಸ್ವಿಯಾಗಿ ಕೇಂದ್ರ ಸರ್ಕಾರ ಯಶಸ್ವೀ ಎರಡು ವರ್ಷ ಪೂರೈಸಿದ ಸಂಭ್ರಮಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸಿದರು ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಕಿದಿಯೂರು ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರನ್ನು ಗೌರವಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿ.ಜೆ.ಪಿ ಫಲಾನುಭವಿಗಳ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ರಾಜೇಂದ್ರ ಪಂದುಬೆಟ್ಟು, ಜಿಲ್ಲಾ ಸಹವಕ್ತಾರ ಶಿವಕುಮಾರ್, ಜಗದೀಶ್ ಆಚಾರ್ಯ, ಪಂಚಾಯತ್ ಸದಸ್ಯರಾದ ಸುಂದರ ಪೂಜಾರಿ ಮತ್ತು ಶಶಿಧರ್ ಪೂಜಾರಿ, ಪ್ರಮುಖರಾದ ರಾಮರಾಜ್, ಗಿರೀಶ್ ಅಮೀನ್, ವಿಷ್ಣು ಪೂಜಾರಿ, ಸುಜಿತ್ ಕಪ್ಪೆಟ್ಟು, ಹರೀಶ್ ಅಂಬಲಪಾಡಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!