ಸುದ್ದಿಕಿರಣ ವರದಿ
ಭಾನುವಾರ, ಜನವರಿ 2, 2022
ಉಡುಪಿ: ಇಲ್ಲಿನ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಎದ್ದಿರುವ ಹಿಜಾಬ್ ವಿವಾದವನ್ನು ಯಾವುದೇ ಸಂಘರ್ಷಕ್ಕೆ ಅವಕಾಶ ಕಲ್ಪಿಸದೆ ಸೌಹಾರ್ದಯುತವಾಗಿ ಬಗೆಹರಿಸುವಂತೆ ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಮನ್ನಾ ಒತ್ತಾಯಿಸಿದ್ದಾರೆ.
ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿರುವ ಶಾಸಕ ರಘುಪತಿ ಭಟ್ ಈ ಬಗ್ಗೆ ಮುತುವರ್ಜಿ ವಹಿಸಿ, ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂದವರು ಮನವಿ ಮಾಡಿದ್ದಾರೆ.