Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಮಸೀದಿಗೆ ಮಂಜೂರಾದ ಸ್ಥಳ ವಶಪಡಿಸಿಕೊಂಡ ಸರ್ಕಾರ

ಮಸೀದಿಗೆ ಮಂಜೂರಾದ ಸ್ಥಳ ವಶಪಡಿಸಿಕೊಂಡ ಸರ್ಕಾರ

ಉಡುಪಿ: ಇಲ್ಲಿನ ಕೊಡವೂರು ಗ್ರಾಮದ ಸರ್ವೇ ನಂ 53/6ರಲ್ಲಿ 0.67 ಸೆಂಟ್ಸ್ ಜಾಗವನ್ನು ವಕ್ಫ್ ಬೋರ್ಡ್ ಮೂಲಕ ಪಳ್ಳಿ ಜಿಡ್ಡ ಕಲ್ಮತ್ ಮಸೀದಿಗೆ ಮಂಜೂರು ಮಾಡಲಾಗಿತ್ತು. ಆದರೆ, ಈ ಬಗ್ಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಭೇಟಿಯಾಗಿ ಸ್ಥಳೀಯ ಪರಿಸ್ಥಿತಿಯನ್ನು ಮನವರಿಕೆ ಮಾಡಿ ಈ ಜಾಗವನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಲಾಗಿದ್ದು, ಅದನ್ನು ಮರಳಿ ಸರಕಾರದ ವಶಕ್ಕೆ ಪಡೆಯುವಂತೆ ಮನವಿ ಮಾಡಿದ್ದರು.

ಅದರಂತೆ ಕಂದಾಯ ಸಚಿವರ ಸೂಚನೆ ಮೇರೆಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಥಳೀಯ ಸ್ಥಿತಿಗತಿ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಜಾಗವನ್ನು ಮರಳಿ ಸರಕಾರದ ವಶಕ್ಕೆ ಪಡೆದು ಜೂ. 22ರಂದು ಅಧಿಸೂಚನೆ ಹೊರಡಿಸಲಾಗಿದೆ.

2018ರಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅಂದಿನ ಜಿಲ್ಲಾಧಿಕಾರಿ ಈ ಜಾಗವನ್ನು ವಕ್ಫ್ ಬೋರ್ಡ್ ಮೂಲಕ ಕಲ್ಮತ್ ಮಸೀದಿ ಹೆಸರಿಗೆ ಮಂಜೂರು ಮಾಡಲು ಶಿಫಾರಸು ಮಾಡಿದ್ದರು.

ಈ ಜಾಗವನ್ನು ಮರಳಿ ಸರಕಾರದ ವಶಕ್ಕೆ ಪಡೆಯುವಂತೆ ಸಲ್ಲಿಸಿದ ಮನವಿಗೆ ತಕ್ಷಣ ಸ್ಪಂದಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಜಾಗವನ್ನು ಮರಳಿ ಸರಕಾರ ತನ್ನ ವಶಕ್ಕೆ ಪಡೆಯುವಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಉಡುಪಿ ಜನತೆಯ ಪರವಾಗಿ ಶಾಸಕ ರಘುಪತಿ ಭಟ್ ಕೃತಜ್ಞತೆ ಸಲ್ಲಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!