ಸುದ್ದಿಕಿರಣ ವರದಿ
ಬುಧವಾರ, ಜುಲೈ 13
ಹಡಪದ ಅಪ್ಪಣ್ಣ ಜಯಂತಿಯಲ್ಲಿ ಸಿಎಂ ಭಾಗಿ
ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಉಡುಪಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಂಗವಾಗಿ ಹಡಪದ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮೊದಲಾದವರಿದ್ದರು.