ಉಡುಪಿ: ಮಲ್ಪೆ ಬಂದರಿನಲ್ಲಿ ಕಳೆದ ಕೆಲವು ತಿಂಗಳಿಂದ ಹಸಿ ಮೀನಿನಲ್ಲಿ ಫಾರ್ಮಾಲಿನ್ ನ್ನು ವಿಪರೀತವಾಗಿ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದು, ಜನರ ಆರೋಗ್ಯಕ್ಕೆ ಹಾನಿಯುಂಟುಮಾಡುವ ಫಾರ್ಮಾಲಿನ್ ಬಳಸಿ ಅಕ್ರಮ ವ್ಯಾಪಾರದಲ್ಲಿ ತೊಡಗಿಕೊಳ್ಳುವವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ಎಚ್ಚರಿಕೆ ನೀಡಿದ್ದಾರೆ.
ಅಂಥ ಪ್ರಕರಣ ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯ ಟೋಲ್ ಫ್ರೀ ನಂ. 1077ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ