Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಮೀನುಗಾರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ವಿತರಣೆ

ಮೀನುಗಾರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ವಿತರಣೆ

ಬೆಂಗಳೂರು: ಕಳೆದ ಡಿಸೆಂಬರ್ ನಲ್ಲಿ ಆಳ ಸಮುದ್ರ ಮೀನುಗಾರಿಕೆಗೆಂದು ಮಲ್ಪೆಯಿಂದ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿದ್ದು, ಆ ಬೋಟ್ ನಲ್ಲಿದ್ದ 7 ಮಂದಿ ಮೀನುಗಾರರು ಇದುವರೆಗೆ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರೆಲ್ಲರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಆ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹೆಚ್ಚುವರಿ ಪರಿಹಾರಧನವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿತರಿಸಿದರು.
ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿಂದು ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆಯಲ್ಲಿ ಪರಿಹಾರಧನ ಚೆಕ್ ವಿತರಿಸಲಾಯಿತು.
ಕಾಣೆಯಾಗಿರುವ 7 ಮಂದಿ ಮೀನುಗಾರರ ಕುಟುಂಬ ಅವರನ್ನೇ ಅವಲಂಬಿಸಿದ್ದು, ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿದ್ದರು. ಆ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ. ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಅವರು ಮುಖ್ಯಮಂತ್ರಿಯನ್ನು ವಿನಂತಿಸಿದ್ದರು. ಹೆಚ್ಚುವರಿ ಪರಿಹಾರ ಮೊತ್ತ ಬಿಡುಗಡೆಗೊಳಿಸಲಾಗಿತ್ತು.

ಮತ್ಸ್ಯ ಸಂಪದ ಯೋಜನೆಗೆ ಚಾಲನೆ
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ಸ್ಯ ಸಂಪದ ಯೋಜನೆಗೆ ಚಾಲನೆ ನೀಡಿದರು. ಮತ್ಸ್ಯ ಸಿರಿ, ಸಾಗರೋತ್ಪನ್ನ ಖಾದ್ಯಗಳನ್ನೂ ಬಿಡುಗಡೆ ಮಾಡಿದರು.
ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಂದಾಯ ಸಚಿವ ಆರ್. ಅಶೋಕ್, ಉಡುಪಿ ಶಾಸಕ ರಘುಪತಿ ಭಟ್, ಶಾಸಕ ಕುಮಾರ ಬಂಗಾರಪ್ಪ, ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ನಿರ್ದೇಶಕ ರಾಮಾಚಾರ್ಯ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!