Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಹೆಚ್ಚುವರಿ ಪರಿಹಾರ ಸ್ವಾಗತಾರ್ಹ

ಹೆಚ್ಚುವರಿ ಪರಿಹಾರ ಸ್ವಾಗತಾರ್ಹ

ಉಡುಪಿ: ಸುವರ್ಣ ತ್ರಿಭುಜ ಬೋಟ್ ದುರಂತದಲ್ಲಿ ಮೃತರಾದ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣದಡಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂ. ಮಂಜೂರು ಮಾಡಿದ ರಾಜ್ಯ ಸರಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮಂದಿ ಮೀನುಗಾರರ ಕುಟುಂಬಿಕರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮಾಡಿದ್ದ ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿ ಪ್ರದರ್ಶಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿ ವಹಿಸಿದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರ ಮುಂದಾಳು ನಾಡೋಜ ಡಾ| ಜಿ. ಶಂಕರ್, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗೂ ಕರಾವಳಿಯ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಯಶಪಾಲ್ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!