Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಹೆದ್ದಾರಿ ಅಭಿವೃದ್ಧಿಗೆ 369 ಕೋ. ಮಂಜೂರು

ಹೆದ್ದಾರಿ ಅಭಿವೃದ್ಧಿಗೆ 369 ಕೋ. ಮಂಜೂರು

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ಸರ್ವತೋಮುಖ ಅಭಿವೃದ್ಧಿಗೆ ಪ್ರಸಕ್ತ ಆರ್ಥಿಕ ಸಾಲಿನಲ್ಲಿ 369 ಕೋ. ರೂ. ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

2021- 22ನೇ ಆರ್ಥಿಕ ವರ್ಷದಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ರಾ.ಹೆ. 169ಎ ಹೆಬ್ರಿ- ಪರ್ಕಳ ರಸ್ತೆ, ಕರಾವಳಿ ಜಂಕ್ಷನ್- ಮಲ್ಪೆ ಸಂಪರ್ಕಿಸುವ ರಸ್ತೆ ಚತುಷ್ಪಥ ಕಾಮಗಾರಿ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಒಟ್ಟು 29.1 ಕಿ.ಮೀ. ಉದ್ದದ ಕಾಮಗಾರಿಗೆ ಕೇಂದ್ರ ಭೂ ಸಾರಿಗೆ ಸಚಿವಾಲಯ 350 ಕೋ. ರೂ. ಅನುದಾನ ಮಂಜೂರು ಮಾಡಿದೆ.

ರಾ.ಹೆ. 169ಎ ಸೀತಾನದಿಗೆ ತಡೆಗೋಡೆ ನಿರ್ಮಾಣ, ರಸ್ತೆ ಎತ್ತರಗೊಳಿಸುವುದು ಮತ್ತು ರಾ.ಹೆ. 169ರ ನೆಮ್ಮಾರು ಬಳಿ ರಸ್ತೆ ಎತ್ತರಿಸಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ 19 ಕೋ. ರೂ. ಅನುದಾನ ಮಂಜೂರಾಗಿದೆ ಎಂದವರು ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!