ಉಡುಪಿ: ಇಲ್ಲಿನ ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕಿನ 2021ನೇ ಸಾಲಿನ ಡೈರಿಯನ್ನು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಶಾಸಕ ಕೆ. ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ನೇತ್ರತಜ್ಞ ಡಾ. ಕೃಷ್ಣ ಪ್ರಸಾದ್ ಹಾಗೂ ಅದಮಾರು ಮಠದ ಮ್ಯಾನೇಜರ್ ಗೋವಿಂದರಾಜ್ ಇದ್ದರು.