Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಕೊರೊನಾದಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ತಲಾ 10 ಸಾವಿರ ನೆರವಿಗೆ ನಿರ್ಧಾರ

ಕೊರೊನಾದಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ತಲಾ 10 ಸಾವಿರ ನೆರವಿಗೆ ನಿರ್ಧಾರ

ಬೆಂಗಳೂರು: ಕೊರೊನಾದಿಂದ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ತಲಾ 10 ಸಾವಿರ ರೂ. ಪರಿಹಾರ ನೀಡಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀರ್ಮಾನಿಸಿದೆ.

ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ತಳೆಯಲಾಯಿತು.

ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ಕಳೆದ ವರ್ಷ ನೀಡಿದಂತೆ ಸರಕಾರದಿಂದ 5 ಲಕ್ಷ ರೂ. ನೆರವು, ಪತ್ರಕರ್ತರ ಕುಟುಂಬಕ್ಕೆ ಪಡಿತರ ಕಿಟ್ ಕೊಡಿಸಲು ತೀರ್ಮಾನಿಸಲಾಯಿತು.

ಬೆಂಗಳೂರಿನಲ್ಲಿ ನಿರ್ಮಿಸಲುದ್ದೇಶಿಸಿರುವ ಪತ್ರಕರ್ತರ ಭವನಕ್ಕೆ ಶೀಘ್ರವಾಗಿ ಶಂಕುಸ್ಥಾಪನೆ ನೆರವೇರಿಸಲು ತೀರ್ಮಾನಿಸಲಾಯಿತು.

ಸಂಘದ ಪದಾಧಿಕಾರಿಗಳಾದ ಮತ್ತಿಕೆರೆ ಜಯರಾಂ, ಜೆ. ಸಿ. ಲೋಕೇಶ್, ಸಂಜೀವ ರಾವ್ ಕುಲಕರ್ಣಿ, ಬಂಗ್ಲೆ ಮಲ್ಲಿಕಾರ್ಜುನ, ಕಟ್ಟಡ ಸಮಿತಿ ಸದಸ್ಯ ಎಚ್. ಬಿ. ಮದನಗೌಡ ಮೊದಲಾದವರಿದ್ದರು.

ಈ ಸಂದರ್ಭದಲ್ಲಿ ಈಚೆಗೆ ಅಗಲಿದ ಪತ್ರಕರ್ತರು ಮತ್ತು ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!