Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಪರಿಶಿಷ್ಟ ಜಾತಿ ಕುಟುಂಬ ಮನೆ ನಿರ್ಮಾಣಕ್ಕೆ ರೂ. 5 ಲಕ್ಷ ಅನುದಾನ: ಸಚಿವ ಕೋಟ

ಪರಿಶಿಷ್ಟ ಜಾತಿ ಕುಟುಂಬ ಮನೆ ನಿರ್ಮಾಣಕ್ಕೆ ರೂ. 5 ಲಕ್ಷ ಅನುದಾನ: ಸಚಿವ ಕೋಟ

ಪರಿಶಿಷ್ಟ ಜಾತಿ ಕುಟುಂಬ ಮನೆ ನಿರ್ಮಾಣಕ್ಕೆ ರೂ. 5 ಲಕ್ಷ ಅನುದಾನ: ಸಚಿವ ಕೋಟ

(ಸುದ್ದಿಕಿರಣ ವರದಿ)
ಬೆಂಗಳೂರು: ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿಮರ್ಾಣಕ್ಕೆ 1.70 ಲಕ್ಷ ರೂ. ನೆರವು ನೀಡಲಾಗುತ್ತಿದೆ. ಈ ಮೊತ್ತದಿಂದ ಒಳ್ಳೆಯ ಮನೆ ನಿರ್ಮಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತೀ ಫಲಾನುಭವಿಗೆ 5 ಲಕ್ಷ ರೂ. ಅನುದಾನ ನೀಡಲು ಅನುಮತಿ ಕೋರಿ ಮುಖ್ಯಮಂತ್ರಿಗೆ ಶೀಘ್ರ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.

ಒಂದು ವರ್ಷ ಕಾಲ ಇಲಾಖೆಯಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಾಗುವುದು. ಅನಿವಾರ್ಯ ಅಲ್ಲದ ಯೋಜನೆಗಳಿಗೆ ತಡೆಹಿಡಿಯಲಾಗುವುದು. ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಉತ್ತಮ ಮನೆ, ಶೌಚಾಲಯ, ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಗುಣಮಟ್ಟದ ಆರೋಗ್ಯ ಸೌಲಭ್ಯ ಮತ್ತು ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಆದ್ಯತೆ ನೀಡಲಾಗುವುದು ಎಂದು ಸಚಿವ ಕೋಟ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಂಪೂರ್ಣವಾಗಿ ಪಾರದರ್ಶಕತೆ ತರಲಾಗುವುದು. ಪಾರದರ್ಶಕತೆ ಇಲ್ಲದೆ ಯಾವುದೇ ಅನುದಾನ ಬಳಕೆಗೂ ಅವಕಾಶ ನೀಡುವುದಿಲ್ಲ ಎಂದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!