Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಸುವರ್ಣ ಆರೋಗ್ಯ ಟ್ರಸ್ಟ್ ನಿಂದ 50 ಲಕ್ಷ ಬಿಡುಗಡೆ

ಸುವರ್ಣ ಆರೋಗ್ಯ ಟ್ರಸ್ಟ್ ನಿಂದ 50 ಲಕ್ಷ ಬಿಡುಗಡೆ

ಸುವರ್ಣ ಆರೋಗ್ಯ ಟ್ರಸ್ಟ್ ನಿಂದ 50 ಲಕ್ಷ ಬಿಡುಗಡೆ

(ಸುದ್ದಿಕಿರಣ ವರದಿ)
ಉಡುಪಿ: ಇಲ್ಲಿನ ಜಿಲ್ಲಾಸ್ಪತ್ರೆಗೆ ಆಯುಷ್ಮಾನ್ ಯೋಜನೆಯ ಸುವರ್ಣ ಆರೋಗ್ಯ ಟ್ರಸ್ಟ್ ಗೆ 50 ಲಕ್ಷ ರೂ. ಬಿಡುಗಡೆಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಮಸ್ಯೆ ಕುರಿತು ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಮುಂದಿನ ಕಾರ್ಯಯೋಜನೆ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ ಶಾಸಕ ರಘುಪತಿ ಭಟ್ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ವಿವರಿಸಿದರು.

ಮಂಜೂರಾದ ಹಣವನ್ನು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬಂದಿ ವೇತನಕ್ಕೆ ಬಳಸಲಾಗುವುದು ಎಂದು ಶಾಸಕ ಭಟ್ ತಿಳಿಸಿದ್ದಾರೆ.

ಈ ಸಂದರ್ಬದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ಆಯುಕ್ತ ಕೆ. ವಿ. ತ್ರಿಲೋಕಚಂದ್ರ, ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕ ಮಧುಸೂದನ್ ನಾಯಕ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!