Monday, July 4, 2022
Home ಸಮಾಚಾರ ವಾಜಪೇಯಿ ಜನ್ಮದಿನಾಚರಣೆ: 96 ಯೂನಿಟ್ ರಕ್ತ ಸಂಗ್ರಹ ಗುರಿ

ವಾಜಪೇಯಿ ಜನ್ಮದಿನಾಚರಣೆ: 96 ಯೂನಿಟ್ ರಕ್ತ ಸಂಗ್ರಹ ಗುರಿ

ಉಡುಪಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲೆ ಮತ್ತು ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಂಯುಕ್ತಾಶ್ರಯದಲ್ಲಿ ಉಡುಪಿ ಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಡಿ. 25ರಂದು ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2ರ ವರೆಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶಿಬಿರ ನಡೆಯಲಿದ್ದು, 96 ಯೂನಿಟ್ ರಕ್ತ ಸಂಗ್ರಹದ ಗುರಿ ಹೊಂದಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಂಚಾಲಕ ಡಾ. ಪ್ರದೀಪ್ ವರ್ಣೇಕರ್, ಸಹಸಂಚಾಲಕ ಡಾ. ರಾಮಚಂದ್ರ ಕಾಮತ್ ತಿಳಿಸಿದ್ದಾರೆ.

ರಕ್ತದಾನ ಶಿಬಿರದಲ್ಲಿ ಭಾಗವಹಿಸಲಿಚ್ಛಿಸುವ ರಕ್ತದಾನಿಗಳು ಶಿಬಿರ ಸಂಚಾಲಕ, ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ (ಫೋ: 98809 48577) ಅವರಲ್ಲಿ ಡಿ. 23ರ ಮೊದಲು ಹೆಸರು ನೋಂದಾಯಿಕೊಳ್ಳುವಂತೆ ತಿಳಿಸಲಾಗಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!