Saturday, July 2, 2022
Home ಸಮಾಚಾರ ತಳಮಟ್ಟದಲ್ಲಿ ಆಮ್ ಆದ್ಮಿ ಪಕ್ಷದ ಬಲವರ್ಧನೆ

ತಳಮಟ್ಟದಲ್ಲಿ ಆಮ್ ಆದ್ಮಿ ಪಕ್ಷದ ಬಲವರ್ಧನೆ

ತಳಮಟ್ಟದಲ್ಲಿ ಆಮ್ ಆದ್ಮಿ ಪಕ್ಷದ ಬಲವರ್ಧನೆ

(ಸುದ್ದಿಕಿರಣ ವರದಿ)
ಉಡುಪಿ: ಜನತೆಯ ಆಶಯಕ್ಕೆ ತಕ್ಕಂತೆ ಆಮ್ ಆದ್ಮಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ರಾಜ್ಯ ವೀಕ್ಷಕ ರೋಮಿ ಭಾಟಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಕ್ಷ ಇನ್ನು ಮುಂದೆ ಪ್ರತಿಯೊಂದು ಚುನಾವಣೆಯಲ್ಲೂ ಸ್ಪರ್ಧಿಸಲಿದೆ. ಈ ನಿಟ್ಟಿನಲ್ಲಿ ಅಮ್ ಆದ್ಮಿ ಪಕ್ಷ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಉಡುಪಿ ಜಿಲ್ಲೆಯ ಜಿ.ಪಂ ಮತ್ತು ತಾ. ಪಂ. ಕ್ಷೇತ್ರಗಳಿಗೆ ಉತ್ತಮ ಮತ್ತು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದರು.

ಈಗಾಗಲೇ ಹಲವು ಕ್ಷೇತ್ರಗಳಿಗೆ ಪಕ್ಷದಿಂದ ಸ್ಪರ್ಧಿಸಲು ಪಕ್ಷದ ಹಲವಾರು ಕಾರ್ಯಕರ್ತರು ಆಕಾಂಕ್ಷಿಗಳಾಗಿದ್ದು, ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುತ್ತಿದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಅನೇಕರು ಪಕ್ಷದ ಚಿಹ್ನೆಯಡಿ ಸ್ಪರ್ಧಿಸಲು ಇಚ್ಚಿಸಿ, ಪಕ್ಷ ವರಿಷ್ಠರನ್ನು ಸಂಪರ್ಕಿಸುತ್ತಿದ್ದಾರೆ. ಎಲ್ಲವನ್ನೂ ಪರಿಶೀಲಿಸಿ ಉತ್ತಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು.

ಉಡುಪಿ ಜಿಲ್ಲೆಯ ಜನತೆ ಅಮ್ ಆದಿ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಹಾಗೂ ಸಂಘಟನಾ ಮುಖ್ಯಸ್ಥ ವಿಜಯ ಶರ್ಮ, ರಾಜ್ಯ ಜೊತೆ ಕಾರ್ಯದರ್ಶಿ ದರ್ಶನ್ ಜೈನ್, ಉಡುಪಿ ಮತ್ತು ದ.ಕ. ಜಿಲ್ಲಾ ವೀಕ್ಷಕ ಅಶೋಕ ಎಡಮಲೆ, ಉಡುಪಿ ನಗರ ಸಂಯೋಜಕ ಆಶ್ಲೇ ಕರ್ನೇಲಿಯೊ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!