Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಸಣ್ಣ ನೀರಾವರಿ ಇಲಾಖೆ ಅಭಿಯಂತರ ಮನೆ, ಕಚೇರಿಗೆ ಎಸಿಬಿ ದಾಳಿ

ಸಣ್ಣ ನೀರಾವರಿ ಇಲಾಖೆ ಅಭಿಯಂತರ ಮನೆ, ಕಚೇರಿಗೆ ಎಸಿಬಿ ದಾಳಿ

ಸುದ್ದಿಕಿರಣ ವರದಿ
ಶುಕ್ರವಾರ, ಜೂನ್ 17

ಸಣ್ಣ ನೀರಾವರಿ ಇಲಾಖೆ ಅಭಿಯಂತರ ಮನೆ, ಕಚೇರಿಗೆ ಎಸಿಬಿ ದಾಳಿ
ಉಡುಪಿ: ರಾಜ್ಯದ ವಿವಿಧ ಕಡೆಗಳಲ್ಲಿ ಶುಕ್ರವಾರ ಮುಂಜಾನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಉಡುಪಿ ಜಿಲ್ಲೆಯ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಉಪ ವಿಭಾಗದ ಸಹಾಯಕ ಅಭಿಯಂತರ ಹರೀಶ್ ಮನೆ ಹಾಗೂ ಕಚೇರಿ ಮೇಲೆ ಉಡುಪಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಲ್ಲಿನ ಕೊರಂಗ್ರಪಾಡಿಯಲ್ಲಿರುವ ಹರೀಶ್ ಮನೆಯ ಮೇಲೆ ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ಸ್‌ ಪೆಕ್ಟರ್‌ ಗಳಾದ ಸತೀಶ್ ಜಿ..ಜೆ. ಮತ್ತು ರಫೀಕ್ ಎಂ., ಸಿಬಂದಿಗಳಾದ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅಬ್ದುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು, ರಮೇಶ್ ಭಂಡಾರಿ ಹಾಗೂ ಪ್ರತಿಮಾ ದಾಳಿಯಲ್ಲಿ ಭಾಗವಹಿಸಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!