ಉಡುಪಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ತಮ್ಮ ಉಪಾಸ್ಯದೇವರ ಸಹಿತ ಆಗಮಿಸಿ, ಪೂಜೆ ನೆರವೇರಿಸಿ ಭಿಕ್ಷೆ ಸ್ವೀಕರಿಸಿದರು.
ಶ್ರೀದೇವಳದ ಪರವಾಗಿ ಶ್ರೀಗಳಿಗೆ ಮಾಲಿಕಾ ಮಂಗಳಾರತಿ ಸಹಿತ ಭಕ್ತಿ ಗೌರವ ಸಮರ್ಪಿಸಲಾಯಿತು. ಬಳಿಕ ಶ್ರೀಗಳು ಆಶೀರ್ವಚನ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ, ಶಾಸಕ ಕೆ. ರಘುಪತಿ ಭಟ್ ಶ್ರೀಪಾದರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಣಿಪಾಲ, ಸ್ಥಳೀಯ ನಗರಸಭಾ ಸದಸ್ಯ ಗಿರಿಧರ ಕರಂಬಳ್ಳಿ, ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ದೇವಸ್ಥಾನದ ಪ್ರಧಾನ ಅರ್ಚಕ ದಿವಾಕರ ಐತಾಳ್ ಮತ್ತು ದೇವಳದ ರಮೇಶ ಬಾರಿತ್ತಾಯ, ವಾಸುದೇವ ಭಟ್ ಹಾಗೂ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಇದ್ದರು