Saturday, July 2, 2022
Home ಸಮಾಚಾರ ರಾಜ್ಯ ವಾರ್ತೆ ಕೊಲ್ಲೂರಿಗೆ ಬರುವ ಭಕ್ತಾದಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯ

ಕೊಲ್ಲೂರಿಗೆ ಬರುವ ಭಕ್ತಾದಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯ

ಕೊಲ್ಲೂರಿಗೆ ಬರುವ ಭಕ್ತಾದಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯ

(ಸುದ್ದಿಕಿರಣ ವರದಿ)
ಕುಂದಾಪುರ: ಕೋವಿಡ್ ಹಿನ್ನೆಲೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ. ಬಿ. ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಸೂಚನೆಯಂತೆ ಸೆ. 4ರಿಂದಲೇ ಅನ್ವಯವಾಗುವಂತೆ ಆಧಾರ್ ಕಾರ್ಡ್ ಕಡ್ಡಾಯ ನೀತಿ ಜಾರಿಗೆ ತರಲಾಗಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ.

ಕರ್ನಾಟಕ ಹೊರತುಪಡಿಸಿ ಇತರ ಕಡೆಗಳ ಭಕ್ತರು ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು.

ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳೊಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಹಾಜರುಪಡಿಸುವುದು ಕಡ್ಡಾಯವಾಗಿದೆ. ಅಲ್ಲದೆ, ಕ್ಷೇತ್ರದಲ್ಲಿ ವ್ಯಕ್ತಿಗತ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊಲ್ಲೂರು ದೇವಸ್ಥಾನಕ್ಕೆ ಕೇರಳದ ಭಕ್ತರು ಅತಿ ಹೆಚ್ಚು ಬರುವುದರಿಂದ ಆಧಾರ್ ಕಾರ್ಡ್ ಕಡ್ಡಾಯ ಮಾಡುವ ಮೂಲಕ ಹೊರರಾಜ್ಯದ ಭಕ್ತರ ಪತ್ತೆಗೆ ಕ್ರಮ ವಹಿಸಲಾಗಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!