Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಕೃಷ್ಣಮೂರ್ತಿಗೆ ಸುವರ್ಣ ಛತ್ರ ಸಮರ್ಪಣೆ

ಕೃಷ್ಣಮೂರ್ತಿಗೆ ಸುವರ್ಣ ಛತ್ರ ಸಮರ್ಪಣೆ

ಉಡುಪಿ: ಕಳೆದ ಸುಮಾರು 800 ವರ್ಷಗಳ ಹಿಂದೆ ದ್ವೈತಮತ ಪ್ರತಿಪಾದಕ ಆಚಾರ್ಯ ಮಧ್ವರು ಉಡುಪಿಯಲ್ಲಿ ಶ್ರೀಕೃಷ್ಣನನ್ನು ಮಕರ ಸಂಕ್ರಮಣ ಶುಭದಿನದಂದು ಪ್ರತಿಷ್ಠಾಪಿಸಿದ್ದರೆಂಬ ಐತಿಹ್ಯದ ಹಿನ್ನೆಲೆಯಲ್ಲಿ ಈ ಪರ್ವದಿನದಂದು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 2.5 ಕಿ.ಗ್ರಾಂ. ತೂಕದ ಸುವರ್ಣ ಛತ್ರ (ಚಿನ್ನದ ಕೊಡೆ) ಸಮರ್ಪಿಸಿದರು.
ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಪ್ರೇರಣೆಯಂತೆ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಚಿನ್ನದ ಛತ್ರ ಸಮರ್ಪಣೆ ಸಂಕಲ್ಪಿಸಿದ್ದರು.

ಈ ಅಪೂರ್ವ ಸನ್ನಿವೇಶಕ್ಕೆ ಪರ್ಯಾಯ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯತೀರ್ಥ ಶ್ರೀಪಾದರೊಂದಿಗೆ ಅಷ್ಟಮಠದ ಯತಿಗಳಾದ ಭಾವಿ ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಮತ್ತು ಸೋದೆ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಸಾಕ್ಷಿಗಳಾದರು.

ಅದಮಾರು ಮಠದ ದಿವಾನ ಲಕ್ಷ್ಮೀನಾರಾಯಣ ಮುಚ್ಚಿಂತಾಯ, ಪರ್ಯಾಯ ಮಠದ ವ್ಯವಸ್ಥಾಪಕ ಗೋವಿಂದರಾಜ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!