ಸುದ್ದಿಕಿರಣ ವರದಿ
ಬುಧವಾರ, ಜೂನ್ 15
ಅಜ್ಜರಕಾಡು ಕಾಲೇಜಿಗೆ ಲೀಡ್ ಕಾಲೇಜು ಮಾನ್ಯತೆ
ಉಡುಪಿ: ಅಜ್ಜರಕಾಡು ಡಾ| ಜಿ. ಶಂಕರ್ ಮಹಿಳಾ ಸರ್ಕಾರಿ ಕಾಲೇಜು ಉಡುಪಿ ಜಿಲ್ಲೆಯ ಲೀಡ್ ಕಾಲೇಜಾಗಿ ಆಯ್ಕೆಯಾಗಿದೆ ಎಂದು ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
ಸುಮಾರು 2,300 ಮಂದಿ ವಿದ್ಯಾರ್ಥಿನಿಯರು ಹಾಗೂ 100ಕ್ಕೂ ಮಿಕ್ಕಿ ಉಪನ್ಯಾಸಕರಿರುವ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಾಲೇಜು ಇದಾಗಿದೆ ಎಂದು ಪ್ರಕಟಣೆ ತಿಳಿಸಿದೆ