Thursday, July 7, 2022
Home ಸಮಾಚಾರ ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅನಿತಾ ಆಯ್ಕೆ

ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅನಿತಾ ಆಯ್ಕೆ

ಉಡುಪಿ: ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ಅನಿತಾ ಡಿ’ಸೋಜ ಬೆಳ್ಮಣ್ ಆಯ್ಕೆಯಾಗಿದ್ದಾರೆ.

ಅವರಿಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಕಾರ್ಯಕ್ರಮವೊಂದರಲ್ಲಿ ನೇಮಕಾತಿ ಆದೇಶಪತ್ರ ನೀಡಲಾಯಿತು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ನೀಡಿದ ಆದೇಶಪತ್ರವನ್ನು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೊ ಅವರು ಅನಿತಾ ಡಿ’ಸೋಜ ಅವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಕೆಪಿಸಿಸಿ ವೀಕ್ಷಕ ಹರೀಶ್ ಕಿಣಿ, ರಾಜ್ಯ ಹಿಂದುಳಿದ ವರ್ಗಗಳ ಘಟಕದ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ, ಜಿತೇಶ್, ಕೀರ್ತಿ ಶೆಟ್ಟಿ, ನಾಗೇಶ್ ಕುಮಾರ್ ಉದ್ಯಾವರ, ಮೀನಾಕ್ಷಿ ಮಾಧವ ಬನ್ನಂಜೆ, ಜ್ಯೋತಿ ಹೆಬ್ಬಾರ್, ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಹೆಬ್ರಿ ಬ್ಲಾಕ್ ಅಧ್ಯಕ್ಷೆ ರಂಜನಿ ಹೆಬ್ಬಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯೆ ಸುಗುಣಾ ಪೂಜಾರಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಾಮದ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!