Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಪುನರ್ವಸತಿ ಕೇಂದ್ರಕ್ಕೆ ಅನುದಾನ: ಮನವಿ

ಪುನರ್ವಸತಿ ಕೇಂದ್ರಕ್ಕೆ ಅನುದಾನ: ಮನವಿ

ಉಡುಪಿ: ಎಂಡೋಸಲ್ಫಾನ್ ಪೀಡಿತ ಅಂಗವಿಕಲರ ಪುನರ್ವಸತಿ ಕೇಂದ್ರಕ್ಕೆ ಅನುದಾನ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಗೃಹಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ನವದೆಹಲಿ ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ ಸಂಯೋಜಿತ ಕರ್ನಾಟಕ ರಾಜ್ಯ ಅಂಗವಿಕಲರು ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅಂಗವಿಕಲರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ಮುಷ್ಕರ ನಡೆಸಲಾಗಿತ್ತು.

ನಂತರದಲ್ಲಿ ಎಂಡೋಪೀಡಿತ ಅಂಗವಿಕಲರಿಗಾಗಿ ನಾಡ ಸೇನಾಪುರದಲ್ಲಿ ಕಾದಿರಿಸಿದ 9.5 ಎಕರೆ ಸರಕಾರಿ ಸ್ಥಳದಲ್ಲಿ ಸುಮಾರು 10 ಕೋ. ರೂ. ವೆಚ್ಚದಲ್ಲಿ ಪುನರ್ವಸತಿ ಕೇಂದ್ರ, ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಮೂಲಕ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಈ ಕುರಿತು ಶೀಘ್ರ ಹಣ ಬಿಡುಗಡೆಗೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರು ಹಾಗೂ ಪಾಲಕರ ಒಕ್ಕೂಟ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ವೆಂಕಟೇಶ್ ಕೋಣಿ, ಅಧ್ಯಕ್ಷ ಮಂಜುನಾಥ ಹೆಬ್ಬಾರ್ ಕಾಲ್ತೋಡು, ಗಣಪತಿ ಪೂಜಾರಿ ಅಮಾಸೆಬೈಲು, ದೇವೇಂದ್ರ ಸುವರ್ಣ ವಡ್ಡರ್ಸೆ, ನಾಗಶ್ರೀ ಬೈಂದೂರು, ಮಮತಾ ಬೆಳ್ವೆ, ಸದಾಶಿವ ಮುದ್ರಾಡಿ, ಹರೀಶ ಕಾರ್ಕಳ, ಪ್ರಕಾಶ ಈದು ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!