Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಅರ್ಥಶಾಸ್ತ್ರ ಪಠ್ಯ ಪುಸ್ತಕ ಬಿಡುಗಡೆ

ಅರ್ಥಶಾಸ್ತ್ರ ಪಠ್ಯ ಪುಸ್ತಕ ಬಿಡುಗಡೆ

ಅರ್ಥಶಾಸ್ತ್ರ ಪಠ್ಯ ಪುಸ್ತಕ ಬಿಡುಗಡೆ
ಉಡುಪಿ: ಪ್ರಥಮ ಸೆಮಿಸ್ಟರ್ ಬಿಬಿಎ ಪಠ್ಯಕ್ಕೆ ಸಂಬಂಧಿಸಿದ ಪ್ರಿನ್ಸಿಪಲ್ಸ್ ಆಫ್ ಇಕೊನೊಮಿಕ್ಸ್ ಪುಸ್ತಕವನ್ನು ಅದಮಾರು ಮಠ ಶಿಕ್ಷಣ ಮಂಡಳಿ ಅಧ್ಯಕ್ಷರೂ ಆಗಿರುವ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.

ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಘಟಕ ಆಶ್ರಯದಲ್ಲಿ ಕಾರ್ಯಕ್ರಮ ಏರ್ಪಾಡಾಗಿತ್ತು.

ಶಿಕ್ಷಕರು ಸತತ ಅಧ್ಯಯನದಲ್ಲಿ ತೊಡಗಿಕೊಂಡು ಉತ್ತಮ ಕೃತಿಗಳನ್ನು ನೀಡುವ ಮೂಲಕ ಸಮಾಜ ಹಾಗೂ ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಶ್ರಮಿಸಬೇಕು. ತರಗತಿಯಲ್ಲಿ ಅಧ್ಯಯನಕ್ಕೆ ನಿಗದಿಪಡಿಸಿದ ವಿಷಯಗಳನ್ನು ಸರಳ ಹಾಗೂ ಸುಲಭ ಬರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ತಲುಪಿಸುವುದು ಸುಲಭದ ಕೆಲಸವಲ್ಲ. ಈ ನಿಟ್ಟಿನಲ್ಲಿ ಲೇಖಕರ ಪ್ರಯತ್ನ ಸ್ತುತ್ಯರ್ಹ ಎಂದರು.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ| ಸೌಜನ್ಯ ಶೆಟ್ಟಿ ಎಂ. ಹಾಗೂ ಮಂಗಳೂರು ಸಂತ ಅಲೋಶಿಯಸ್ ಸಂಧ್ಯಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ| ವಿ. ಬಿ. ಹನ್ಸ್ ಕೃತಿ ರಚಿಸಿದ್ದರು.

ಅಭ್ಯಾಗತರಾಗಿದ್ದ ಕಾಲೇಜಿನ ಗೌರವ ಕೋಶಾಧಿಕಾರಿ, ವಕೀಲ ಪ್ರದೀಪ್ ಕುಮಾರ್, ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಅರ್ಥಶಾಸ್ತ್ರ ಒಂದಲ್ಲ ಒಂದು ರೀತಿಯಲ್ಲಿ ಪ್ರಾಶಸ್ತ್ಯ ಪಡೆದಿದೆ. ವಿದ್ಯಾರ್ಥಿಗಳು ಅರ್ಥಶಾಸ್ತ್ರದತ್ತ ಒಲವು ತೋರಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ| ರಾಘವೇಂದ್ರ ಎ. ಅಧ್ಯಕ್ಷತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಖಾತರಿ ಘಟಕ ಸಂಯೋಜಕ, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ಉಪಪ್ರಾಂಶುಪಾಲ ಡಾ| ಪ್ರಕಾಶ ರಾವ್ ಇದ್ದರು.

ಲೇಖಕಿ ಡಾ. ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಮೀನಾಕ್ಷಿ ವಂದಿಸಿದರು. ಉಪನ್ಯಾಸಕಿ ಮಹಾಲಕ್ಷ್ಮಿ ನಿರೂಪಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!