Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಮಲಬಾರ್ ಗೋಲ್ಡ್ ನಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನ

ಮಲಬಾರ್ ಗೋಲ್ಡ್ ನಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನ

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ಮಾ. 6ರಿಂದ 14ರ ವರೆಗೆ ನಡೆಯಲಿದೆ.

ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹವಿದೆ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ರಾಘವೇಂದ್ರ ನಾಯಕ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೈನ್ ನಲ್ಲಿ ವಜ್ರಾಭರಣಗಳ ಅಭೂತಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣೀಕೃತ ವಜ್ರಾಭಾರಣಗಳಿವೆ. ಡಿವೈನ್ ನಲ್ಲಿ ಭಾರತೀಯ ಸಂಸ್ಕೃತಿ ಪ್ರತಿಬಿಂಬಿಸುವ ಚಿನ್ನಾಭರಣ ಹಾಗೂ ಪ್ರಶಿ ಯಲ್ಲಿ ರೂಬಿ, ಎಮರಾಲ್ಡ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣ ಸಂಗ್ರಹವಿದೆ. ಎಥಿನಿಕ್ಸ್ ನಲ್ಲಿ ಕರಕುಶಲ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಾಗುವುದು. ಏರ ಅನ್ಕಟ್ ಡೈಮಂಡ್ಸ್, ಹಾಯ್ ನಲ್ಲಿ ಯುವತಿಯರ ಮನಸೆಳೆಯುವ ಮನಮೋಹಕ ಆಭರಣ, ಸ್ಟಾರ್ಲೆಟ್ ನಲ್ಲಿ ಚಿಕ್ಕ ಮಕ್ಕಳಿಗಾಗಿ ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ಚಿನ್ನಾಭರಣ ಪ್ರದರ್ಶನವಿದೆ ಎಂದರು.

ಮೇಳದಲ್ಲಿ ಸಂಪೂರ್ಣ ಪಾರದರ್ಶಕ, ಉಚಿತ ನಿರ್ವಹಣೆ, ವಿನಿಮಯದಲ್ಲಿ ಶೂನ್ಯ ಕಡಿತ, ಬೈ- ಬ್ಯಾಕ್ ಗ್ಯಾರಂಟಿ, ಉಚಿತ ವಿಮೆ, 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣ ಮಲಬಾರ್ ವಿಶೇಷತೆಗಳಾಗಿವೆ ಎಂದು ನಾಯಕ್ ವಿವರಿಸಿದರು.

ಸೇವಾ ಪ್ರಕಲ್ಪ ವ್ಯವಸ್ಥಾಪಕ ತಂಝೀಮ್ ಸುದ್ದಿಗೋಷ್ಠಿಯಲ್ಲಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!