Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಆಶಾದೀಪ ಯೋಜನೆ ಪ್ರಯೋಜನ ಪಡೆಯಲು ಸಲಹೆ

ಆಶಾದೀಪ ಯೋಜನೆ ಪ್ರಯೋಜನ ಪಡೆಯಲು ಸಲಹೆ

ಉಡುಪಿ: ಕರ್ನಾಟಕ ಖಾಸಗಿ ವಲಯದ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡಲು, ಉದ್ದಿಮೆಗಳ ಮಾಲೀಕರನ್ನು ಪ್ರೋತ್ಸಾಹಿಸುವ ಸಲುವಾಗಿ ಜಾರಿಗೆ ತಂದಿರುವ ಆಶಾದೀಪ ಯೋಜನೆಯ ಪ್ರಯೋಜನವನ್ನು ಜಿಲ್ಲೆಯ ಎಲ್ಲಾ ಉದ್ದಿಮೆದಾರರು ಪಡೆಯುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಶಾದೀಪ ಯೋಜನೆ ಅನುಷ್ಠಾನದ ಪ್ರಗತಿ ಮತ್ತು ಯೋಜನೆಯ ಅರ್ಜಿಗಳ ಪ್ರಾಥಮಿಕ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಶಾದೀಪ ಯೋಜನೆ ಕುರಿತಂತೆ ಜಿಲ್ಲೆಯ ಎಲ್ಲಾ ಉದ್ದಿಮೆದಾರರಿಗೆ ಅಗತ್ಯ ಮಾಹಿತಿ ನೀಡಿ, ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಕಾರ್ಮಿಕ ಇಲಾಖೆಗೆ ಸೂಚಿಸಿದರು.
ಆಶಾದೀಪ ಯೋಜನೆಯಡಿ ಖಾಸಗಿ ವಲಯದ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ, ಅಪ್ರೆಂಟಿಸ್ ತರಬೇತಿ ನೀಡಿದಲ್ಲಿ ಅಂಥ ಸಂಸ್ಥೆಗಳ ಉದ್ಯೋಗದಾತರು ಅಥವಾ ಮಾಲೀಕರಿಗೆ ನಿಗದಿತ ಅವಧಿಯ ವರೆಗೆ ಅವರು ಪರಿಶಿಷ್ಟ ಜಾತಿ, ವರ್ಗದ ಸಿಬ್ಬಂದಿಗಳಿಗೆ ನೀಡುವ ವೇತನದ ನಿಗದಿತ ಮೊತ್ತವನ್ನು ಸರಕಾರ ಮರು ಪಾವತಿಸಲಿದೆ ಎಂದರು.
ಆಶಾದೀಪ ಯೋಜನೆಯ ಪ್ರಯೋಜನ ಕೋರಿ ಅರ್ಜಿ ಸಲ್ಲಿಸಿದ ಏಕೋ ಕೆಮ್ ಲ್ಯಾಬೋರೇಟರೀಸ್ ಸಂಸ್ಥೆ ಮಾಲೀಕರಿಗೆ 1,03,035 ರೂ. ಚೆಕ್ ವಿತರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ. ಆರ್., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರೇಮ್ ಸಾಗರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!