ಸುದ್ದಿಕಿರಣ ವರದಿ
ಮಂಗಳವಾರ, ಫೆಬ್ರವರಿ 22
ಹಿಜಾಬ್: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ ಸಹೋದರನಿಗೆ ಹಲ್ಲೆ
ಉಡುಪಿ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ನುಗ್ಗಿ, ಸಹೋದರನಿಗೆ ಹಲ್ಲೆಗೈದ ಘಟನೆ ಸೋಮವಾರ ರಾತ್ರಿ 9.30ರ ಸುಮಾರಿಗೆ ನಡೆದಿದೆ.
ಮಲ್ಪೆ ಪೇಟೆಯಲ್ಲಿರುವ ಹೈದರ್ ಅಲಿ ಎಂಬವರ ಬಿಸ್ಮಿಲ್ಲಾ ಹೋಟೆಲ್ ಗೆ ಆರೇಳು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಹೈದರ್ ಅಲಿ ಪುತ್ರ ಸೈಪ್ (20) ಎಂಬವರಿಗೆ ಹಲ್ಲೆ ನಡೆಸಿದ್ದಾರೆ. ಗಾಯಾಳು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ಸುಳಿವು ಲಭಿಸಿದೆ ಎಂದಿದ್ದಾರೆ