Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಅಯೋಧ್ಯೆ ರಾಮಮಂದಿರ: ಜನಪ್ರತಿನಿಧಿಗಳಿಂದ ನೆರವು ಯಾಚನೆ

ಅಯೋಧ್ಯೆ ರಾಮಮಂದಿರ: ಜನಪ್ರತಿನಿಧಿಗಳಿಂದ ನೆರವು ಯಾಚನೆ

ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯ ಶ್ರೀರಾಮ ಮಂದಿರಕ್ಕೆ ಪ್ರತಿಯೊಬ್ಬ ಭಾರತೀಯನಿಂದಲೂ ನಿಧಿ ಸಂಗ್ರಹದ ಆಶಯದ ಅಂಗವಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್ ಸಹಿತ ವಿವಿಧ ಜನಪ್ರತಿನಿಧಿಗಳು ನಿಧಿ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದಾರೆ.

ತಮ್ಮ ಕ್ಷೇತ್ರ ವ್ಯಾಪ್ತಿ ಪ್ರತೀ ಮನೆ ಮನೆಗೆ ಭೇಟಿ ನೀಡಿ ಧನ ಯಾಚನೆಯಲ್ಲಿ ನಿರತರಾಗಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ
ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾನುವಾರ ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂದಟ್ಟುನಲ್ಲಿ ಮನೆ ಮನೆಗೆ ಭೇಟಿ ನೀಡಿ, ನಿಧಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದರು.

ಮಟ್ಟಾರು ರತ್ನಾಕರ ಹೆಗ್ಡೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು ಶಿರ್ವ ಗ್ರಾ. ಪಂ. ವ್ಯಾಪ್ತಿಯ ಮನೆಗಳಿಗೆ ತೆರಳಿ ನಿಧಿ ಸಂಗ್ರಹಿಸಿದರು. ಗ್ರಾ. ಪಂ. ಸದಸ್ಯರಾದ ಸುರೇಶ್ ನಾಯಕ್ ಮತ್ತು ಮಮತ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ನ ರಂಜಿತ್ ಶೆಟ್ಟಿ, ವಕೀಲ ನಿತೀಶ್ ಶೆಟ್ಟಿ ಮೊದಲಾದವರಿದ್ದರು.

ರಘುಪತಿ ಭಟ್
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ನಿರ್ಮಾಣವಾಗುತ್ತಿರುವ ಅಯೋಧ್ಯಾ ರಾಮ ಮಂದಿರ ನಿಧಿ ಸಂಗ್ರಹದಲ್ಲಿ ಶಾಸಕ ರಘುಪತಿ ಭಟ್ ತೊಡಗಿದರು. ತಮ್ಮ ಕ್ಷೇತ್ರ ವ್ಯಾಪ್ತಿಯ ಮನೆ ಮನೆಗಳಿಗೆ ತೆರಳಿ ಕರಪತ್ರ ನೀಡಿ, ನಿಧಿ ಯಾಚಿಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಉಡುಪಿ ಜಿಲ್ಲಾ ಸಂಘಚಾಲಕ ನಾರಾಯಣ ಶೆಣೈ ಇದ್ದರು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!