Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಹೈಕೋರ್ಟಿಗೆ ಮೇಲ್ಮನವಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಹೈಕೋರ್ಟಿಗೆ ಮೇಲ್ಮನವಿ

ಉಡುಪಿ: ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳು ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಹಾಗೂ ನವನೀತ ಶೆಟ್ಟಿ ಮೇಲ್ಮನವಿ ಮತ್ತು ಜಾಮೀನು ಅರ್ಜಿಯನ್ನು ಹೈಕೋರ್ಟಿಗೆ ಸಲ್ಲಿಸಿದ್ದಾರೆ.

2016ರಲ್ಲಿ ನಡೆದ ಈ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 8ರಂದು ಮಹತ್ವದ ತೀರ್ಪು ನೀಡಿತ್ತು. ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ಜೋತಿಷಿ ನಿರಂಜನ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರಂತೆ ಈ ಮೂವರು ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಇನ್ನೋರ್ವ ಆರೋಪಿ ನಿರಂಜನ ಭಟ್ ಇದುವರೆಗೆ ಅರ್ಜಿ ಹಾಕಿಲ್ಲ ಎಂದು ತಿಳಿದುಬಂದಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!