Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಉಡುಪಿಗೆ ಇ.ಎಸ್.ಐ ಆಸ್ಪತ್ರೆ ಮಂಜೂರು: ಬಿಜೆಪಿ ಸಂತಸ

ಉಡುಪಿಗೆ ಇ.ಎಸ್.ಐ ಆಸ್ಪತ್ರೆ ಮಂಜೂರು: ಬಿಜೆಪಿ ಸಂತಸ

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 15

ಉಡುಪಿಗೆ ಇ.ಎಸ್.ಐ ಆಸ್ಪತ್ರೆ ಮಂಜೂರು: ಬಿಜೆಪಿ ಸಂತಸ
ಉಡುಪಿ: ಕೇಂದ್ರ ಸರಕಾರ ಉಡುಪಿ ಜಿಲ್ಲೆಗೆ 100 ಹಾಸಿಗೆ ಸಾಮರ್ಥ್ಯದ ಇಎಸ್.ಐ ಆಸ್ಪತ್ರೆ ಮಂಜೂರು ಮಾಡಿರುವುದನ್ನು ಸ್ವಾಗತಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಆ ಮೂಲಕ ಜಿಲ್ಲೆಯ ಬಹುಕಾಲದ ಬಯಕೆ ಈಡೇರಿದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆ ಮಂಜೂರು ಮಾಡಿಸುವಲ್ಲಿ ಸಹಕರಿಸಿದ ಪ್ರಧಾನಿ ಮೋದಿ, ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಹಾಗೂ ಉಡುಪಿ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುವಲ್ಲಿ ವಿಶೇಷ ಮುತುವರ್ಜಿ ವಹಿಸಿದ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕುಯಿಲಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!