Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ

ಕೇಂದ್ರ ಸಚಿವರನ್ನು ಭೇಟಿ ಮಾಡಿದ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ

ಮಂಗಳೂರು: ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಈಚೆಗೆ ದೆಹಲಿ ಪ್ರವಾಸ ಕೈಗೊಂಡಿದ್ದು, ನೂತನ ಕೇಂದ್ರ ಸಚಿವರನ್ನು ಭೇಟಿ ಮಾಡಿ ಅಭಿನಂದಿಸಿದರು.

ಪ್ರಧಾನಿ ನರೇಂದ್ರ ಮೋದಿ ನೂತನ ಸಚಿವ ಸಂಪುಟದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖುಬಾ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಇದ್ದರು.

ಸಚಿವೆ ಶೋಭಾಗೆ ಅಭಿನಂದನೆ
ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅಭಿನಂದಿಸಿದರು.

ಸಚಿವ ನಾರಾಯಣಸ್ವಾಮಿಗೆ ಅಭಿನಂದನೆ
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧ್ಯಕ್ಷ ಎಂ. ಅಭಿನಂದಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!