Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ವಿಶ್ವ ರಕ್ತದಾನಿಗಳ ದಿನಾಚರಣೆ

ವಿಶ್ವ ರಕ್ತದಾನಿಗಳ ದಿನಾಚರಣೆ

ಸುದ್ದಿಕಿರಣ ವರದಿ
ಮಂಗಳವಾರ, ಜೂನ್ 14

ವಿಶ್ವ ರಕ್ತದಾನಿಗಳ ದಿನಾಚರಣೆ
ಮಣಿಪಾಲ: ವಿಶ್ವ ರಕ್ತದಾನಿಗಳ ದಿನ ಅಂಗವಾಗಿ ಮಂಗಳವಾರ ಸುರಕ್ಷಿತ ರಕ್ತ ಮತ್ತು ವರ್ಗಾವಣೆಗಾಗಿ ರಕ್ತದ ಉತ್ಪನ್ನಗಳ ಅಗತ್ಯತೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಲ್ಲಿನ ಕೆಎಂಸಿ ಆಸ್ಪತ್ರೆಯ ರಕ್ತನಿಧಿ ವಿಭಾಗ ಆಶ್ರಯದಲ್ಲಿ ರಕ್ತದಾನಿಗಳ ದಿನಾಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸ್ವಯಂಪ್ರೇರಿತ ರಕ್ತದಾನಿಗಳನ್ನು ಗೌರವಿಸಲಾಯಿತು.

ಮಣಿಪಾಲ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ನಿರ್ದೇಶಕ ಕಮಾಂಡರ್ (ಡಾ|) ಅನಿಲ್ ರಾಣಾ ಮುಖ್ಯ ಅತಿಥಿಯಾಗಿದ್ದರು. ರಕ್ತ ದಾನಿಗಳು ಮತ್ತು ಅದರ ಪ್ರೇರಕರನ್ನು ಅಭಿನಂದಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೆಎಂಸಿ ಡೀನ್ ಡಾ. ಶರತ್ ಕೆ. ರಾವ್, ರಕ್ತಕ್ಕೆ ಪರ್ಯಾಯವಿಲ್ಲ. ಅದನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತದಾನ ಮಾಡುವುದೊಂದೇ ರಕ್ತಕ್ಕೆ ಪರ್ಯಾಯ ಮಾರ್ಗವಾಗಿದೆ. ಒಬ್ಬ ವ್ಯಕ್ತಿ ರಕ್ತದಾನದ ಮೂಲಕ ಮೂರು ಜೀವಗಳನ್ನು ಉಳಿಸಬಹುದು ಎಂದರು.

ಕೆಎಂಸಿ ಆಸ್ಪತ್ರೆಯ ಸಿಒಒ ಸಿ.ಜಿ. ಮುತ್ತಣ್ಣ ಇದ್ದರು.

ಆಸ್ಪತ್ರೆಯ ರಕ್ತನಿಧಿ ಮುಖ್ಯಸ್ಥೆ ಡಾ. ಶಮ್ಮಿ ಶಾಸ್ತ್ರಿ ಸ್ವಾಗತಿಸಿ, ವಿಶ್ವ ರಕ್ತದಾನಿಗಳ ದಿನದ ಕುರಿತು ಮಾತನಾಡಿದರು. ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ವಂದಿಸಿದರು.

ಕೆ. ಸತೀಶ್ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ ಅತ್ಯುತ್ತಮ ಸಿಬ್ಬಂದಿ ಪ್ರಶಸ್ತಿ ಮತ್ತು 3 ಆರ್ಟ್ ಆಬ್ಜೆಕ್ಟ್ ಮೇಕಿಂಗ್ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!