Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಬೊಟಾನಿಕಲ್ ಗಾರ್ಡನ್ ನಿರ್ಮಾಣದ ಆಶಯ

ಬೊಟಾನಿಕಲ್ ಗಾರ್ಡನ್ ನಿರ್ಮಾಣದ ಆಶಯ

ಉಡುಪಿ: ಇಲ್ಲಿನ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ವಠಾರದಲ್ಲಿ ವಿವಿಧ ಬಗೆಯ ಹಣ್ಣು ಹಾಗೂ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ಬೊಟಾನಿಕಲ್ ಗಾರ್ಡನ್ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಜಿಲ್ಲಾಡಳಿತ, ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ಬ್ರಹ್ಮಾವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವೃಕ್ಷಾರೋಪಣ ಕಾರ್ಯಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಪರಿಸರ ರಕ್ಷಣೆಗೆ ಆದ್ಯತೆ ನೀಡಿದಲ್ಲಿ ಆರೋಗ್ಯವಂತ ಸಮಾಜದ ಪರಿಕಲ್ಪನೆ ಸಾಕಾರ ಸಾಧ್ಯ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡ ಮರಗಳನ್ನು ಬೆಳೆಸಿ ಪೋಷಿಸಿ, ಸಂರಕ್ಷಿಸುವಲ್ಲಿ ಜಿಲ್ಲೆಯ ಸಂಘಸಂಸ್ಥೆಗಳು ಕ್ರಿಯಾಶೀಲ ಪ್ರಯತ್ನ ನಡೆಸಿದಲ್ಲಿ ಉಡುಪಿ ಹಸಿರು ಜಿಲ್ಲೆಯಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ, ಡಾ. ಪ್ರೇಮಾನಂದ, ಡಾ. ರಾಮಚಂದ್ರ ಕಾಮತ್, ಮಧುಸೂದನ ಹೇರೂರು, ಸುವರ್ಣ ಎಂಟರ್ ಪ್ರೈಸಸ್ ಮುಖ್ಯಸ್ಥೆ ಸುನೀತಾ ಮಧುಸೂದನ್, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ, ಮಿಲ್ಟನ್ ಒಲಿವೇರಾ, ದರ್ಶಕ್, ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಚಾಲಕ ಗಣೇಶ್ ಪ್ರಸಾದ್ ಜಿ. ನಾಯಕ್, ಜಗದೀಶ್ ಶೆಟ್ಟಿ ಮೊದಲಾದವರಿದ್ದರು.

ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!