ಉಡುಪಿ: ಕೊರೊನಾ ಕಾರಣದಿಂದಾಗಿ ಮುಂದೂಡಲ್ಪಟ್ಟ ಇಲ್ಲಿನ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜ. 11ರಿಂದ 19ರ ವರೆಗೆ ನಡೆಯುವ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ಆಡಳಿತ ಮೊಕ್ತೇಸರ, ಶಾಸಕ ಕೆ. ರಘುಪತಿ ಭಟ್ ಮತ್ತು ಪಾಡಿಗಾರು ವಾಸುದೇವ ತಂತ್ರಿ ಬಿಡುಗಡೆಗೊಳಿಸಿದರು.
ಶ್ರೀದೇವಳದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಅರ್ಚಕರು ಇದ್ದರು