Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಬ್ರಹ್ಮಾವರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ

ಬ್ರಹ್ಮಾವರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ

ಬ್ರಹ್ಮಾವರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ

(ಸುದ್ದಿಕಿರಣ ವರದಿ)
ಬ್ರಹ್ಮಾವರ: ಜಿಲ್ಲಾ ಪಂಚಾಯತ್ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬ್ರಹ್ಮಾವರ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಬೋರ್ಡ್ ಹೈಸ್ಕೂಲ್ ನ ಅಮ್ಮೆಂಬಳ ಸುಬ್ಬರಾವ್ ಪೈ ವೇದಿಕೆಯಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು.

ಶಾಸಕ ಕೆ. ರಘುಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಿ, ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ವಿವರಿಸಿದರು.

ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಗೌರವಿಸಲಾಯಿತು.

ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರಮೂರ್ತಿ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ್, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಓಂಪ್ರಕಾಶ್, ತನಿಷ್ಕ್ ಡೈಮಂಡ್ಸ್ ನ ಮ್ಯಾಕ್ಸಿನ್ ಸೆಲ್ಡಂ ಮತ್ತು ಗ್ರೇಟ್ ಸೆಲ್ಡಂ, ಬ್ರಹ್ಮಾವರ ಬೋರ್ಡ್ ಹೈಸ್ಕೂಲ್ ಉಪ ಪ್ರಾಂಶುಪಾಲ ಬಿ. ಟಿ. ನಾಯ್ಕ್ ಮೊದಲಾದವರಿದ್ದರು.

ಶಿಕ್ಷಕರಾದ ನಂಚಾರು ಶಶಿಧರ ಶೆಟ್ಟಿ ಸ್ವಾಗತಿಸಿ, ಅರ್ಚನ ವಂದಿಸಿದರು. ಮಂಜುಳ ಜಯಕರ್ ನಿರೂಪಿಸಿದರ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!