Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಪ್ರಕರಣ ಭೇದಿಸಿದ ಪೊಲೀಸರಿಗೆ 50 ಸಾವಿರ ಬಹುಮಾನ

ಪ್ರಕರಣ ಭೇದಿಸಿದ ಪೊಲೀಸರಿಗೆ 50 ಸಾವಿರ ಬಹುಮಾನ

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 15

ಪ್ರಕರಣ ಭೇದಿಸಿದ ಪೊಲೀಸರಿಗೆ 50 ಸಾವಿರ ಬಹುಮಾನ
ಕುಂದಾಪುರ: ಕಾರಿನ ಸಮೇತ ವ್ಯಕ್ತಿಯನ್ನು ಸಜೀವ ದಹನ ಮಾಡಿ ಕೊಲೆಗೈದ ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿದ ಬೈಂದೂರು ಪೊಲೀಸರ ತಂಡವನ್ನು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ಅಭಿನಂದಿಸಿದ್ದು, 50 ಸಾವಿರ ರೂ. ಬಹುಮಾನ ಪ್ರಕಟಿಸಿದ್ದಾರೆ.

ಬೈಂದೂರು ಪೊಲೀಸ್ ಠಾಣೆಗೆ ಶುಕ್ರವಾರ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದುಕೊಂಡರು ಎಂದು ಬೈಂದೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿನ್ನಾಭರಣ ಕಳವು ಪ್ರಕರಣ ಹಾಗೂ ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಡ ರಚಿಸಿ ಕ್ಷಿಪ್ರವಾಗಿ ಪ್ರಕರಣ ಭೇದಿಸಲಾಗಿದೆ.

ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣದ ಸಮಗ್ರ ತನಿಖೆ ಮುಂದುವರಿದಿದ್ದು, ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದರು.

ಕುಂದಾಪುರ ಡಿವೈಎಸ್.ಪಿ ಶ್ರೀಕಾಂತ್ ಕೆ., ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಬೈಂದೂರು ಪಿಎಸ್.ಐ ಪವನ್ ನಾಯಕ್, ಗಂಗೊಳ್ಳಿ ಪಿಎಸ್.ಐ ವಿನಯ್ ಎಂ. ಕೊರ್ಲಹಳ್ಳಿ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!