Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಸಿಐಟಿಯು ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ

ಸಿಐಟಿಯು ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 8

ಸಿಐಟಿಯು ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ
ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನವೆಂಬರ್ 15ರಿಂದ ಮೂರು ದಿನಗಳ ಕಾಲ ನಡೆಯುವ ಕಾರ್ಮಿಕ ಸಂಘಟನೆ ಸಿಐಟಿಯು 15ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು. ಕುಂದಾಪುರ ಆರ್.ಎನ್. ಶೆಟ್ಟಿ ಸಭಾಭವನದಲ್ಲಿ ಸಮಾವೇಶ ನಡೆಯಲಿದೆ.

ಲಾಂಛನ ಬಿಡುಗಡೆ ಮಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪ್ ಸಿಂಹ, ರಾಜ್ಯ ಮತ್ತು ಕೇಂದ್ರದ ಬಂಡವಾಳಶಾಹಿ ಪರ ಕಾನೂನು ತಿದ್ದುಪಡಿ, ಬೆಲೆ ಏರಿಕೆಯಿಂದ ಜನಸಾಮಾನ್ಯರ ಕಷ್ಟ ಕಾರ್ಪಣ್ಯಗಳು, ಉಡುಪಿ ಜಿಲ್ಲೆಯ ಅಭಿವೃದ್ಧಿಯ ಕಡೆಗಣನೆ ಮೇಲೆ ಈ ಸಮ್ಮೇಳನ ಚರ್ಚಿಸಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 600 ಮಂದಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕಾರ್ಮಿಕರ ಐಕ್ಯತೆ ಹಾಗೂ ಜನರ ಸೌಹಾರ್ದತೆಯ ಘೋಷಣೆಯೊಂದಿಗೆ ಸಮ್ಮೇಳನ ನಡೆಸಲಾಗುತ್ತಿದೆ. ಕರಾವಳಿಯ ಸಾಂಸ್ಕೃತಿಕ ಹಿನ್ನೆಲೆ, ಸೌಹಾರ್ದತೆ ಗಟ್ಟಿಗೊಳಿಸುವ ಸಂದೇಶವನ್ನು ಲಾಂಛನದಲ್ಲಿ ಬಿಂಬಿಸಲಾಗಿದೆ ಎಂದರು.

ಸಮ್ಮೇಳನ ಗೌರವಾಧ್ಯಕ್ಷ ಕೆ. ಶಂಕರ್, ಖಜಾಂಚಿ ಎಚ್. ನರಸಿಂಹ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಸಿಐಟಿಯು ಉಡುಪಿ ತಾಲೂಕು ಅಧ್ಯಕ್ಷ ರಾಮ ಕಾರ್ಕಡ ಮಾತನಾಡಿದರು.

ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಹಾಗೂ ಸ್ವಾಗತ ಸಮಿತಿ ಉಪಾಧ್ಯಕ್ಷ ಶೇಖರ ಬಂಗೇರ, ಸಿಐಟಿಯು ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಕವಿರಾಜ್, ಶಶಿಧರ ಗೊಲ್ಲ ಇದ್ದರು.

ಪ್ರಚಾರ ಸಮಿತಿ ಸಂಚಾಲಕ ಚಂದ್ರಶೇಖರ ವಿ. ಸ್ವಾಗತಿಸಿ, ನಿರೂಪಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!