ಉಡುಪಿ: ಕರ್ನಾಟಕ ಜಾನಪದ ಪರಿಷತ್ ಉಡುಪಿ ಘಟಕ ಮತ್ತು ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ವತಿಯಿಂದ ಹಿರಿಯಡ್ಕ ಅಂಜಾರು ದುರ್ಗಾಪರಮೇಶ್ವರಿ ದೇವಸ್ಥಾನ ವಠಾರದಲ್ಲಿ 30 ಮಂದಿಗೆ, ಕಾರ್ಕಳ ಶಿರಡಿ ಸಾಯಿಬಾಬಾ ಮಂದಿರದಲ್ಲಿ 30 ಮಂದಿಗೆ ಹಾಗೂ ಬೆಳ್ಮಣ್ ಗ್ರಾಮ ಪಂಚಾಯತ್ ವಠಾರದಲ್ಲಿ 50 ಮಂದಿಗೆ ಅಗತ್ಯ ವಸ್ತುಗಳ ಕಿಟ್ ಗಳನ್ನು ಈಚೆಗೆ ವಿತರಿಸಲಾಯಿತು.
ಕರ್ನಾಟಕ ಜಾನಪದ ಪರಿಷತ್ ಉಡುಪಿ ಘಟಕ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ, ಕಲಾರಂಗ ಕಾರ್ಕಳ ಅಧ್ಯಕ್ಷ ಚಂದ್ರಹಾಸ ಸುವರ್ಣ, ಕರ್ನಾಟಕ ಜಾನಪದ ಪರಿಷತ್ ಉಡುಪಿ ಘಟಕ ಕಾರ್ಯದರ್ಶಿ ರವಿರಾಜ್ ನಾಯಕ್, ಲಯನ್ಸ್ ಕ್ಲಬ್ ಜಿಲ್ಲೆ 317ಸಿ ಜಿಲ್ಲಾ ಗವರ್ನರ್ ನೀಲಕಂಠ ಎಂ. ಹೆಗಡೆ, ಉಡುಪಿ ರೆಡ್ ಕ್ರಾಸ್ ಕಾರ್ಯದರ್ಶಿ ಜಯರಾಮ ಆಚಾರ್ಯ, ಮರಾಠಿ ದುರ್ಗಾಪರಮೇಶ್ವರಿ ಸಂಘ ಅಧ್ಯಕ್ಷ ವೆಂಕಟೇಶ ನಾಯ್ಕ್, ಬೆಳ್ಮಣ್ ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ದನ ತಂತ್ರಿ ಇದ್ದರು