Monday, July 4, 2022
Home ಸಮಾಚಾರ ಸಂಘಸಂಗತಿ ಕೊರೊನಾ ಕಠಿಣ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಅಭಿನಂದನೀಯ

ಕೊರೊನಾ ಕಠಿಣ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಅಭಿನಂದನೀಯ

ಉಡುಪಿ: ಕೊರೊನಾ ಸಂಕಷ್ಟ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ ಎಂದು ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶಪಾಲ್ ಸುವರ್ಣ ಹೇಳಿದರು.

ಬ್ಯಾಂಕ್ ವತಿಯಿಂದ ಸುಮಾರು 3 ಲಕ್ಷ ರೂ. ವೆಚ್ಚದಲ್ಲಿ ಕಾಪು ಹಾಗೂ ಉಡುಪಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ 295 ಆಶಾ ಕಾರ್ಯಕರ್ತೆಯರಿಗೆ ಗೌರವಧನ ಚೆಕ್ ವಿತರಿಸಿ ಮಾತನಾಡಿದರು.

ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಮನೆ ಮನೆಗೆ ತೆರಳಿ ಸೇವೆ ಸಲ್ಲಿಸಿದ್ದಾರೆ. ಕೊರೊನಾ ಬಗ್ಗೆ ಜನಜಾಗೃತಿ ಮೂಡಿಸುವ ಜೊತೆಗೆ ಕೊರೊನಾ ಪೀಡಿತರಿಗೆ ಮಾನಸಿಕ ಸ್ಥೈರ್ಯ ತುಂಬಿದ ಆಶಾ ಕಾರ್ಯಕರ್ತೆಯರ ಸೇವೆ ಅಭಿನಂದನೀಯ ಎಂದರು.

ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಮೂಡಬೆಟ್ಟು, ಕಾಪು, ಶಿರ್ವ, ಪಡುಬಿದ್ರಿ, ಮುದರಂಗಡಿ, ಹಿರಿಯಡ್ಕ, ಕುಕ್ಕೆಹಳ್ಳಿ, ಹಿರೇಬೆಟ್ಟು, ಪೆರ್ಣಂಕಿಲ, ಮಣಿಪುರ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಿಗೆ ಚೆಕ್ ವಿತರಿಸಲಾಗಿದ್ದು ಮಲ್ಪೆ, ಕೆಮ್ಮಣ್ಣು, ಉಡುಪಿ ನಗರ, ಮಣಿಪಾಲ ಹಾಗೂ ಕೋಡಿಬೆಂಗ್ರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಶಾ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ವಿತರಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್, ಜಿ. ಪಂ. ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿ. ಪಂ. ಮಾಜಿ ಸದಸ್ಯರಾದ ಶಿಲ್ಪಾ ಜಿ. ಸುವರ್ಣ ಮತ್ತು ಶಶಿಕಾಂತ್ ಪಡುಬಿದ್ರೆ, ಕಾಪು ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು, ಕಾಪು ಯೋಜನಾ ಪ್ರಾಧಿಕಾರ ಅಧ್ಯಕ್ಷ ಸುಧಾಮ ಶೆಟ್ಟಿ, ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕಿನ ನಿರ್ದೇಶಕ ವಾಸುದೇವ ಸಾಲ್ಯಾನ್, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಭೈರಂಪಳ್ಳಿ ಗ್ರಾ. ಪಂ. ಅಧ್ಯಕ್ಷ ಜಿಯಾನಂದ ಹೆಗ್ಡೆ, ಕುಕ್ಕೆಹಳ್ಳಿ ಗ್ರಾ. ಪಂ. ಅಧ್ಯಕ್ಷ ಪುರಂದರ ಕೋಟ್ಯಾನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ, ಆತ್ರಾಡಿ ಗ್ರಾ. ಪಂ. ಉಪಾಧ್ಯಕ್ಷ ರತ್ನಾಕರ ಶೆಟ್ಟಿ, ಫಲಿಮಾರು ಗ್ರಾ. ಪಂ. ಅಧ್ಯಕ್ಷೆ ಗಾಯತ್ರಿ ಪ್ರಭು, ಮುದರಂಗಡಿ ಗ್ರಾ. ಪಂ. ಅಧ್ಯಕ್ಷೆ ಯೋಗಿನಿ ಶೆಟ್ಟಿ, ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸಂದೀಪ್ ಶೆಟ್ಟಿ ಬಡಗಬೆಟ್ಟು, ಪ್ರವೀಣ್ ಪೂಜಾರಿ ಶಿರ್ವ, ಶಿವರಾಮ ಭಂಡಾರಿ ಮುದರಂಗಡಿ, ಶಿರ್ವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಸಾದ್ ಶೆಟ್ಟಿ ಕುತ್ಯಾರು, ಹಿಂದೂ ಯುವ ಸೇನೆ ಹಿರಿಯಡ್ಕ ಶಾಖೆ ಅಧ್ಯಕ್ಷ ಶೇಖರ ಶೆಟ್ಟಿ, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಜಿ. ಕೆ. ಶೀನ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!