ಉಡುಪಿ: ಇಸ್ಕಾನ್ ಅಕ್ಷಯ ಪಾತ್ರೆ ಫೌಂಡೇಶನ್ ವತಿಯಿಂದ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 2 ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಠಿಕ ಆಹಾರ ಸಾಮಗ್ರಿಗಳನ್ನೊಳಗೊಂಡ ಕಿಟ್ ವಿತರಣೆ ನಡೆಸಲಾಯಿತು.
ಕೋವಿಡ್ ಎರಡನೇ ಅಲೆಯ ಸಂಕಷ್ಟದ ಸಮಯದಲ್ಲಿ ಇಸ್ಕಾನ್ ಅಕ್ಷಯ ಪಾತ್ರೆ ಫೌಂಡೇಶನ್ ನೀಡಿರುವ ವಿಶೇಷ ಪೌಷ್ಠಿಕ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟತಟ್ಟು ಪಡುಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಿಗೆ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಮತ್ತು ಉಪಾಧ್ಯಕ್ಷ ವಾಸು ಪೂಜಾರಿ ಹಸ್ತಾಂತರಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಾ ಪೂಜಾರಿ, ಸದಸ್ಯರಾದ ಸತೀಶ್ ಕುಂದರ್, ರವೀಂದ್ರ ತಿಂಗಳಾಯ, ರಾಬರ್ಟ್ ರೊಡ್ರಿಗಸ್, ಪ್ರಕಾಶ ಹಂದಟ್ಟು, ಸೀತಾ, ವಿದ್ಯಾ ಎಸ್. ಸಾಲಿಯಾನ್, ಸಾಯಿರಾ ಬಾನು ಹಾಗೂ ಪಂಚಾಯತ್ ಸಿಬ್ಬಂದಿಯಯವರಿದ್ದರು