Monday, July 4, 2022
Home ಸಮಾಚಾರ ಸಂಘಸಂಗತಿ ಲಾರಿ ಚಾಲಕರಿಗೆ ಉಚಿತ ಆಹಾರ ವಿತರಣೆ

ಲಾರಿ ಚಾಲಕರಿಗೆ ಉಚಿತ ಆಹಾರ ವಿತರಣೆ

ಉಡುಪಿ: ಲಾಕ್ ಡೌನ್ ಅವಧಿಯಲ್ಲಿ ಹೋಟೆಲ್ ಗಳು ಮುಚ್ಚಿದ್ದು ಅದರಲ್ಲೂ ಸಣ್ಣಪುಟ್ಟ ಹೋಟೆಲ್ ಮತ್ತು ಕ್ಯಾಂಟೀನ್ ನಡೆಸುವವರು ಮನೆಯಲ್ಲಿಯೇ ಕಾಲ ಕಳೆಯುವಂತಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಅಗತ್ಯ ವಸ್ತುಗಳನ್ನು ಸಾಗಾಟ ಮಾಡುವ ಲಾರಿ ಚಾಲಕರ ಉಪಾಹಾರ, ಊಟದ ಸಮಯದಲ್ಲಿ ರಸ್ತೆ ಬದಿಯಲ್ಲಿ ಹೋಟೆಲ್ ಇಲ್ಲದ ಕಾರಣ ಸಮಸ್ಯೆ ಎದುರಿಸುತ್ತಿದ್ದಾರೆ.

ಅದನ್ನು ಮನಗಂಡು ಇಲ್ಲಿನ ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯಲ್ಲಿ ತರಕಾರಿ, ದಿನಸಿ ಸಾಮಗ್ರಿ, ಅಡುಗೆ ಅನಿಲ, ಪೆಟ್ರೋಲಿಯಂ ಉತ್ಪನ್ನ ಸಾಗಾಟ ಮಾಡುವ ಲಾರಿ ಚಾಲಕರಿಗೆ ಬುಧವಾರ ಆಹಾರ ಪೊಟ್ಟಣಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಗಣೇಶ್ ಪ್ರಸಾದ್, ರಾಘವೇಂದ್ರ ಪ್ರಭು ಕರ್ವಾಲು, ರವೀಂದ್ರ ಹೇರೂರು, ಸಂತೋಷ್ ನಾಯ್ಕ್, ಉದಯ ನಾಯ್ಕ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!