Monday, July 4, 2022
Home ಸಮಾಚಾರ ಸಂಘಸಂಗತಿ ಜೋಸೆಫ್ ಪಿಂಟೊ ಆಯ್ಕೆ

ಜೋಸೆಫ್ ಪಿಂಟೊ ಆಯ್ಕೆ

ಉಡುಪಿ: ಪ್ರಧಾನಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮ ಅನುಷ್ಠಾನ ಉಸ್ತುವಾರಿಗಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯ ಜಿಲ್ಲಾ ಸ್ಥಾಯಿ ಸಮಿತಿಯ ಅಲ್ಪಸಂಖ್ಯಾತರ ಪ್ರತಿನಿಧಿಗಳ ತಂಡದಲ್ಲಿ ಬಡಾನಿಡಿಯೂರು ಗ್ರಾಮ ಪಂಚಾಯತ್ ಸದಸ್ಯ ಜೋಸೆಫ್ ಪಿಂಟೋ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಸರ್ಕಾರ ನೇಮಿಸಿದೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ರಘುಪತಿ ಭಟ್ ಮತ್ತು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಶಿಫಾರಸಿನ ಮೇರೆಗೆ ಈ ಆಯ್ಕೆ ನಡೆದಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!