ಮಣಿಪಾಲ: ಇಲ್ಲಿನ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿಗೆ ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ವತಿಯಿಂದ ಸುಮಾರು 70 ಸಾವಿರ ರೂ. ಮೌಲ್ಯದ ವಾಟರ್ ಚಿಲ್ಲರ್ ನ್ನು ಸಾರ್ವಜನಿಕ ಉಪಯೋಗಕ್ಕಾಗಿ ಕೊಡುಗೆಯಾಗಿ ನೀಡಲಾಯಿತು.
ಜಿಲ್ಲಾಧಿಕಾರಿ ಜಿ. ಜಗದೀಶ್ ವಾಟರ್ ಚಿಲ್ಲರ್ ಉದ್ಘಾಟಿಸಿದರು.
ಉಡುಪಿ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜನಾರ್ದನ, ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು, ಸೊಸೈಟಿ ಅಧ್ಯಕ್ಷ ಸಂಜೀವ ಕಾಂಚನ್, ನಿರ್ದೇಶಕ ಪುರುಷೋತ್ತಮ ಪಿ. ಶೆಟ್ಟಿ, ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಎಸ್. ಮೊದಲಾದವರಿದ್ದರು