Thursday, July 7, 2022
Home ಸಮಾಚಾರ ಸಂಘಸಂಗತಿ ರಕ್ತ ಕೊರತೆ ನೀಗಿಸಲು ರಕ್ತದಾನ ಶಿಬಿರ

ರಕ್ತ ಕೊರತೆ ನೀಗಿಸಲು ರಕ್ತದಾನ ಶಿಬಿರ

ಉಡುಪಿ: ಮುಂದಿನ ದಿನಗಳಲ್ಲಿ ಸಂಭವಿಸುವ ರಕ್ತದ ಕೊರತೆಯನ್ನು ನೀಗಿಸುವ ಪ್ರಯತ್ನವಾಗಿ ಬುಧವಾರ ಬಿಜೆಪಿ ಉಡುಪಿ ನಗರ ಆಶ್ರಯದಲ್ಲಿ ಬಿಜೆಪಿ ಯುವಮೋರ್ಚಾ ಉಡುಪಿ ನಗರ ಹಾಗೂ ಕೆಎಂಸಿ ರಕ್ತನಿಧಿ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮಣಿಪಾಲದಲ್ಲಿ ನಡೆಸಲಾಯಿತು.

ರಕ್ತದಾನಿ ಸತೀಶ್ ಸಾಲಿಯಾನ್ ಹಾಗೂ ರಕ್ತನಿಧಿ ವಿಭಾಗದ ವಿಶ್ವೇಶ್ ರಕ್ತದಾನದ ಮಹತ್ವ ಕುರಿತು ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಶಿಬಿರಕ್ಕೆ ಚಾಲನೆ ನೀಡಿದರು.

ಬಿಜೆಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಪ್ರಮುಖರಾದ ಗುರುಪ್ರಸಾದ್ ಶೆಟ್ಟಿ, ರಕ್ತದಾನಿ ಸತೀಶ್ ಸಾಲ್ಯಾನ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಶಾಂತ್ ಕುಮಾರ್, ನಿಧೀಶ್ ಶ್ರೀಯಾನ್, ಕಾರ್ಯದರ್ಶಿಗಳಾದ ಶ್ರೀವತ್ಸ ಮತ್ತು ಸಂದೇಶ ಪ್ರಭು, ತೆಂಕನಿಡಿಯೂರು ಯುವ ಮೋರ್ಚಾ ಅಧ್ಯಕ್ಷ ಸೂರಜ್ ಪೂಜಾರಿ, ಹೆರ್ಗ ಮಹಾ ಶಕ್ತಿಕೇಂದ್ರ ಅಧ್ಯಕ್ಷ ಪ್ರವೀಣ್ ನಾಯಕ್, ನಿಖಿಲ್ ಮಡಿವಾಳ, ಗುರು ಮಡಿವಾಳ, ವಿಕ್ರಮ್ ಶಾನುಭಾಗ್, ಕಾರ್ತಿಕ್ ಪಾಲನ್, ನರಸಿಂಹ ಮೊದಲಾದವರಿದ್ದರು.

ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ ರಕ್ತದಾನಿಗಳನ್ನು ಅಭಿನಂದಿಸಿದರು. ಮೇ 1ರಂದು ಲಸಿಕೆ ಹಾಕಿಸಿಕೊಳ್ಳುವ ಮೊದಲು ಎಲ್ಲಾ ಯುವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವಂತೆ ವಿನಂತಿಸಿದರು.

ಶಿಬಿರದಲ್ಲಿ 62 ಯುನಿಟ್ ರಕ್ತ ಸಂಗ್ರಹಿಸಲಾಯಿತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!