Monday, July 4, 2022
Home ಸಮಾಚಾರ ಸಂಘಸಂಗತಿ ರೋಬೊಸಾಫ್ಟ್ ನಿಂದ ಕೊಡುಗೆ

ರೋಬೊಸಾಫ್ಟ್ ನಿಂದ ಕೊಡುಗೆ

ಉಡುಪಿ: ಕೊರೊನಾ ಸೋಂಕಿತರ ಚಿಕಿತ್ಸೆಗೆ ಇಲ್ಲಿನ ರೋಬೊಸಾಫ್ಟ್ ವತಿಯಿಂದ ಆಕ್ಸಿಜನ್ ಕಾನ್ಸಂಟ್ರೇಟರ್ ಹಾಗೂ ಪಲ್ಸ್ ಆಕ್ಸಿಮೀಟರ್ ಗಳನ್ನು ಜಿಲ್ಲಾಡಳಿತಕ್ಕೆ ಕೊಡುಗೆಯಾಗಿ ನೀಡಲಾಯಿತು.

20 ಲಕ್ಷ ರೂ. ವೆಚ್ಚದ 10 ಲೀ. ಸಾಮರ್ಥ್ಯದ 7 ಆಕ್ಸಿಜನ್ ಕಾನ್ಸಂಟ್ರೇಟರ್ ಹಾಗೂ 1,000 ಫಲ್ಸ್ ಆಕ್ಸಿಮೀಟರ್ ಗಳನ್ನು ಶುಕ್ರವಾರ ಸಂಸ್ಥೆಯ ಪ್ರಮುಖರು ಶಾಸಕ ರಘುಪತಿ ಭಟ್ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜ. ಜಗದೀಶ್ ಮೂಲಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.

ರೋಬೊಸಾಫ್ಟ್ ಆಡಳಿತ ನಿರ್ದೇಶಕ ರೋಹಿತ್ ಭಟ್, ಆರ್ಥಿಕ ನಿರ್ದೇಶಕ ಸುಧೀರ್ ಭಟ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರಚಂದ್ರ ಸೂಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಧುಸೂದನ ನಾಯಕ್, ಕೋವಿಡ್ ನೋಡಲ್ ಅಧಿಕಾರಿ ಡಾ. ಪ್ರಶಾಂತ ಭಟ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!