Thursday, July 7, 2022
Home ಸಮಾಚಾರ ಸಂಘಸಂಗತಿ ಲಸಿಕೆಯಿಂದಷ್ಟೆ ಕೋವಿಡ್ ನಿಯಂತ್ರಣ ಸಾಧ್ಯ

ಲಸಿಕೆಯಿಂದಷ್ಟೆ ಕೋವಿಡ್ ನಿಯಂತ್ರಣ ಸಾಧ್ಯ

ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ಸದಸ್ಯರಿಗೆ ಮಣಿಪಾಲ ಮಾಧವ ಕೃಪಾ ಶಾಲೆಯಲ್ಲಿ ಈಚೆಗೆ ಏರ್ಪಡಿಸಲಾದ ಕೋವಿಡ್ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಭೇಟಿ ನೀಡಿದರು.

ಕೋವಿಡ್ ನಿಯಂತ್ರಣ ಸಾಧಿಸಬೇಕಾದಲ್ಲಿ ವ್ಯಾಕ್ಸಿನೇಷನ್ ಆಗಬೇಕು. ಲಸಿಕೆಯಿಂದಷ್ಟೇ ಕೋವಿಡ್ ನಿಯಂತ್ರಣ ಸಾಧ್ಯ. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕೆಲಸ ಆರೋಗ್ಯ ಇಲಾಖೆಯಿಂದ ಆಗುತ್ತಿದೆ. ಯಾವುದೇ ಗೊಂದಲ ಬೇಡ. ಲಸಿಕೆ ಲಭ್ಯವಿರುವ ಸಮಯದಲ್ಲಿ ಪ್ರತಿಯೊಬ್ಬರೂ ಲಸಿಕೆ ಪಡೆದು ಕೋವಿಡ್ ನಿಯಂತ್ರಣಕ್ಕಾಗಿ ಸಹಕಾರ ನೀಡಿ ಎಂದವರು ವಿನಂತಿಸಿದರು.

ಈ ಸಂದರ್ಭದಲ್ಲಿ ಉಡುಪಿ ವಲಯ ಅಧ್ಯಕ್ಷ ಪ್ರಕಾಶ್ ಕೊಡಂಕೂರು, ಕಾರ್ಯದರ್ಶಿ ಸುಕೇಶ್ ಅಮೀನ್, ಜಿಲ್ಲಾಧ್ಯಕ್ಷ ಕರಂದಾಡಿ ಶ್ರೀಧರ ಶೆಟ್ಟಿಗಾರ್, ಜಿಲ್ಲಾ ಮಾಧ್ಯಮ ಪ್ರತಿನಿಧಿ ಜನಾರ್ದನ ಕೊಡವೂರು, ಆಸ್ಟ್ರೋ ಮೋಹನ್, ಭಾರತಿ ಭಾಸ್ಕರ್, ಮಹೇಶ್ ಸುವರ್ಣ, ರಂಜಿತ್ ಕೊಡವೂರು, ರಾಘವೇಂದ್ರ ನಾಯಕ್, ಮಿತ್ರ ಕುಮಾರ್ ಮೊದಲಾದವರಿದ್ದರು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!