Saturday, July 2, 2022
Home ಸಮಾಚಾರ ಸಂಘಸಂಗತಿ ವಿಶ್ವ ಸ್ತನ್ಯ ಪಾನ ಸಪ್ತಾಹ, ಆರೋಗ್ಯವಂತ ಶಿಶು ಸ್ಪರ್ಧೆ

ವಿಶ್ವ ಸ್ತನ್ಯ ಪಾನ ಸಪ್ತಾಹ, ಆರೋಗ್ಯವಂತ ಶಿಶು ಸ್ಪರ್ಧೆ

ವಿಶ್ವ ಸ್ತನ್ಯ ಪಾನ ಸಪ್ತಾಹ, ಆರೋಗ್ಯವಂತ ಶಿಶು ಸ್ಪರ್ಧೆ

(ಸುದ್ದಿಕಿರಣ ವರದಿ)
ಉಡುಪಿ: ಇನ್ನರ್ ವ್ಹೀಲ್ ಕ್ಲಬ್ ಉಡುಪಿ ಆಶ್ರಯದಲ್ಲಿ ಮಣಿಪಾಲದ ನಗರ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ದೊಡ್ಡಣಗುಡ್ಡೆ ವ್ಯಾಯಾಮ ಶಾಲೆಯಲ್ಲಿ ಈಚೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಯ ಪೋಷಣ್ ಅಭಿಯಾನ್ ಕಾರ್ಯಕ್ರಮದಡಿ ವಿಶ್ವ ಸ್ತನ್ಯ ಪಾನ ಸಪ್ತಾಹ ಅಂಗವಾಗಿ ಮಹಿಳೆಯರಿಗೆ ಆರೋಗ್ಯ ಅರಿವು ಮತ್ತು ಆರೋಗ್ಯವಂತ ಶಿಶು ಪ್ರದರ್ಶನ ಹಾಗೂ ಸ್ಪರ್ಧೆ ಏರ್ಪಡಿಸಲಾಯಿತು.

ಸಂಪನ್ಮೂಲವ್ಯಕ್ತಿಯಾಗಿದ್ದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ವಿಜಯ ಉಡುಪಿ, ತಾಯಂದಿರು ಮತ್ತು ಮಕ್ಕಳ ಆರೋಗ್ಯ, ಮಕ್ಕಳಿಗೆ ಎದೆಹಾಲು ಉಣಿಸುವ ಮಹತ್ವ, ಶಿಶುವಿನ ಆರೋಗ್ಯ ಸಂರಕ್ಷಣೆ ಮಾಡುವಲ್ಲಿ ಎದೆಹಾಲಿನಲ್ಲಿ ಅಡಕವಾಗಿರುವ ಪೋಷಕಾಂಶ ಮತ್ತು ರೋಗ ನಿರೋಧಕ ಶಕ್ತಿ, ಮಕ್ಕಳನ್ನು ಪೋಷಿಸುವಲ್ಲಿ ತಾಯಂದಿರ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ವಿವರಿಸಿ, ವೈದ್ಯಕೀಯ ಸಲಹೆ ನೀಡಿದರು.

ಆರೋಗ್ಯವಂತ ಶಿಶು ಸ್ಪರ್ಧೆಯಲ್ಲಿ ಪ್ರಥಮ ಮೂರು ಸ್ಥಾನ ಗಳಿಸಿದ ಮಕ್ಕಳಿಗೆ ಬಹುಮಾನ ವಿತರಿಸಿದರು.

ಉಪಸ್ಥಿತರಿದ್ದ ಮಣಿಪಾಲ ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಚಾಮಿನ್ ಭಾಗವಹಿಸಿದ ಮಕ್ಕಳು ಮತ್ತು ತಾಯಂದಿರಿಗೆ ಪ್ರೋತ್ಸಾಹಕ ಕೊಡುಗೆ ನೀಡಿದರು.

ಇನ್ನರ್ ವ್ಹೀಲ್ ಅಧ್ಯಕ್ಷೆ ಶುಭಾ ಎಸ್. ಬಾಸ್ರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾರ್ಯದರ್ಶಿ ಶಾಲಿನಿ ರಾಘವೇಂದ್ರ ವಂದಿಸಿದರು.

ದೊಡ್ಡಣಗುಡ್ಡೆ ಆಶಾ ಕಾರ್ಯಕರ್ತೆಯರಾದ ಸುಮನಾ, ಉಷಾ ಮತ್ತು ರೂಪಾ ಕಾರ್ಯಕ್ರಮ ಸಂಘಟಿಸುವಲ್ಲಿ ಸಹಕರಿಸಿದರು. ಅನೇಕ ಮಂದಿ ತಾಯಂದಿರು ಮತ್ತು ಮಕ್ಕಳು, ಇನ್ನರ್ ವ್ಹೀಲ್ ಸದಸ್ಯೆಯರು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!