Sunday, July 3, 2022
Home ಸಮಾಚಾರ ಸಂಘಸಂಗತಿ ವೈದ್ಯಕೀಯ ಪರಿಕರ ಕೊಡುಗೆ

ವೈದ್ಯಕೀಯ ಪರಿಕರ ಕೊಡುಗೆ

ಉಡುಪಿ: ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಸಂದರ್ಭದಲ್ಲಿ ಸತತವಾಗಿ ಶ್ರಮಿಸುತ್ತಿರುವ ಇಲ್ಲಿನ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಹಾಗೂ ತಾರನಾಥ ಮೇಸ್ತ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಅವರಿಗೆ ವೈದ್ಯಕೀಯ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು.

ಪಿಪಿಇ ಕಿಟ್, ಸರ್ಜಿಕಲ್ ಗೌನ್ ಹಾಗೂ ಥರ್ಮೋಮೀಟರ್ ಗನ್ ಇತ್ಯಾದಿಗಳನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ವತಿಯಿಂದ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಭಾಪತಿ ಡಾ| ತಲ್ಲೂರು ಶಿವರಾಮ ಶೆಟ್ಟಿ, ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ. ಜಿ., ಗೌರವ ಕಾರ್ಯದರ್ಶಿ ಕೆ. ಜಯರಾಮ ಆಚಾರ್ಯ ಸಾಲಿಗ್ರಾಮ, ಸದಸ್ಯರಾದ ಶಿವಪ್ರಸಾದ್ ಶೆಟ್ಟಿ, ಡಾ. ಅಭಿನಯ್ ಅಶೋಕ್, ಡಿ.ಡಿ.ಆರ್.ಸಿ ಸಿಬಂದಿ ಅನುಷಾ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!