Sunday, July 3, 2022
Home ಸಮಾಚಾರ ಸಂಘಸಂಗತಿ ಆಂಗ್ಲ ಭಾಷಾ ಕಲಿಕಾ ತರಬೇತಿ

ಆಂಗ್ಲ ಭಾಷಾ ಕಲಿಕಾ ತರಬೇತಿ

ಮಣಿಪಾಲ: ಇಲ್ಲಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮತ್ತು ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಯುಕ್ತಾಶ್ರಯದಲ್ಲಿ ಭಾರತ ಸರಕಾರದ ನ್ಯಾಷನಲ್ ರೂರಲ್ ಲಿವ್ಲೀಹುಡ್ ಮಿಷನ್ ನಡಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳಿಗೆ ಆಂಗ್ಲ ಭಾಷಾ ಕಲಿಕೆ ತರಬೇತಿಗೆ ಚಾಲನೆ ನೀಡಲಾಯಿತು.

ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಚಾಲಕ ಗಣೇಶ್ ಪ್ರಸಾದ್ ಜಿ. ನಾಯಕ್ ಮಾತನಾಡಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಯುವ ಜನತೆಯನ್ನು ಸಮಾಜದ ಆಸ್ತಿಯನ್ನಾಗಿ ರೂಪಿಸುವಲ್ಲಿ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಕೌಶಲ್ಯಾಭಿವೃದ್ಧಿ ಜೊತೆಗೆ ಆತ್ಮನಿರ್ಭರ ಭಾರತ ಪರಿಕಲ್ಪನೆ ಸಾಕಾರಗೊಳಿಸಲು ಯುವಜನರಿಗೆ ವಿವಿಧ ತರಬೇತಿಗಳ ಇಂಧನ ಒದಗಿಸುತ್ತಿರುವ ಸಂಸ್ಥೆಯ ಕಾರ್ಯ ಪ್ರಶಂಸನೀಯ.

ಆಂಗ್ಲ ಭಾಷೆ ಕಲಿಕಾ ತರಬೇತಿ, ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಪ್ರತೀ ತಿಂಗಳು ಉಚಿತವಾಗಿ ನಡೆಯಲಿದೆ ಎಂದರು.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಉಪನ್ಯಾಸಕಿ ನವ್ಯಾ ಮಾತನಾಡಿ, ಎಲ್ಲಾ ಶಿಬಿರಾರ್ಥಿಗಳಿಗೆ ಆಂಗ್ಲ ಭಾಷೆ ಮತ್ತು ಕಂಪ್ಯೂಟರ್ ಬಗ್ಗೆ ಸಾಮಾನ್ಯ ಜ್ಞಾನ ಅತ್ಯಗತ್ಯ. ಭಾರತ ಸರಕಾರವೂ ಈ ಎರಡು ಅಂಶಗಳನ್ನು ಕಡ್ಡಾಯಗೊಳಿಸಿದ್ದು, ಸರಕಾರದ ಮಹತ್ವಾಕಾಂಕ್ಷೆಯ ಡಿಜಿಟಲ್ ಸಾಕ್ಷರತೆಗೆ ಇವೆರಡೂ ಪೂರಕವಾಗಿವೆ ಎಂದರು.

ಉಪನ್ಯಾಸಕಿ ಶ್ರೇಯಾ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!