Monday, July 4, 2022
Home ಸಮಾಚಾರ ಸಂಘಸಂಗತಿ ರಕ್ತದಾನದಲ್ಲಿ ಯುವಜನತೆ ಸ್ಪಂದನೆ ಅನುಕರಣೀಯ

ರಕ್ತದಾನದಲ್ಲಿ ಯುವಜನತೆ ಸ್ಪಂದನೆ ಅನುಕರಣೀಯ

ಮಣಿಪಾಲ: ಈಚಿನ ದಿನಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ರಕ್ತದಾನ ಶಿಬಿರಗಳು ನಿರಂತರವಾಗಿ ನಡೆಯುತ್ತಿದ್ದು ಹಲವಾರು ಸಂಘಟನೆಗಳು ಈ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿವೆ. ಶಿಬಿರಗಳಿಗೆ ಸ್ಪಂದಿಸಿ ರಕ್ತದಾನ ಮಾಡುವ ಯುವಜನತೆಯ ಸಾಮಾಜಿಕ ಚಿಂತನೆ ಅನುಕರಣೀಯ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ನಲ್ಲಿ ಅಭಯಹಸ್ತ ಹೆಲ್ಪ್ ಲೈನ್ ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ಲಯನ್ಸ್ ಕ್ಲಬ್ ಉಡುಪಿ ಚೇತನ, ರೋಟರಿ ಕ್ಲಬ್ ಉಡುಪಿ ರಾಯಲ್ ಹಾಗೂ ಡಾ. ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕಾಲೇಜು ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಆಯೋಜಿಸಿದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ರಕ್ತದಾನ ಮಾಡುವುದರಿಂದ ದೇಹಕ್ಕೆ ಬರುವ ಹಲವಾರು ಸಂಭವನೀಯ ಕಾಯಿಲೆಗಳಿಗೆ ತಡೆ ಒಡ್ಡಬಹುದು ಎಂದರು.

ಕಾಲೇಜಿನ ಶೈಕ್ಷಣಿಕ ಸಂಯೋಜಕ ಟಿ. ರಂಗ ಪೈ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಟಿ. ನರೇಂದ್ರ ಪೈ, ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ರಕ್ತನಿಧಿ ವಿಭಾಗ ಮುಖ್ಯಸ್ಥೆ ಡಾ. ಶಮಿ ಶಾಸ್ತ್ರಿ, ಸಹಕಾರ ಭಾರತಿ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ, ಲಯನ್ಸ್ ಅಧ್ಯಕ್ಷ ರತ್ನಾಕರ ಶೆಟ್ಟಿ ಆತ್ರಾಡಿ, ಈಶ್ವರನಗರ ರೆಸಿಡೆನ್ಶಿಯಲ್ ವೆಲ್ ಫೇರ್ ಅಸೋಸಿಯೇಶನ್ ಅಧ್ಯಕ್ಷ ಡಾ. ಸುರೇಶ ರಮಣ ಮಯ್ಯ, ಸ್ನೇಹ ಸಂಗಮ ಅಧ್ಯಕ್ಷ ಹರೀಶ್ ಜಿ. ಕಲ್ಮಾಡಿ, ವಾರ್ಡ್ ಸಮಿತಿ ಅಧ್ಯಕ್ಷ ಗಿರೀಶ್ ಇದ್ದರು.

ಕಾರ್ಯಕ್ರಮ ಸಂಯೋಜಕ, ನಗರಸಭಾ ಸದಸ್ಯ ಮಂಜುನಾಥ ಮಣಿಪಾಲ ಸ್ವಾಗತಿಸಿದರು. ಉಪಪ್ರಾಂಶುಪಾಲ ಡೆರಿಕ್ ಮಸ್ಕರೇನಸ್ ವಂದಿಸಿದರು. ರಕ್ತದಾನಿ ಸತೀಶ್ ಸಾಲಿಯಾನ್ ನಿರೂಪಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!