Thursday, July 7, 2022
Home ಸಮಾಚಾರ ಸಂಘಸಂಗತಿ ಮೀನುಗಾರಿಕೆ ಫೆಡರೇಶನ್ ಕಟ್ಟಡ ನಿರ್ಮಾಣ ಪ್ರಕ್ರಿಯೆ ಪ್ರಗತಿಯಲ್ಲಿ

ಮೀನುಗಾರಿಕೆ ಫೆಡರೇಶನ್ ಕಟ್ಟಡ ನಿರ್ಮಾಣ ಪ್ರಕ್ರಿಯೆ ಪ್ರಗತಿಯಲ್ಲಿ

ಮಂಗಳೂರು: ದ. ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಸದಸ್ಯರಿಗೆ ಸಂಸ್ಥೆಯ ವ್ಯವಹಾರದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ನಗರದ ಕೇಂದ್ರ ಭಾಗದಲ್ಲಿ ಸರಕಾರದ ನಿವೇಶನದಲ್ಲಿ ಪ್ರಧಾನ ಕಚೇರಿಯ ಸುಸಜ್ಜಿತ ಕಟ್ಟಡ ನಿರ್ಮಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ತಿಳಿಸಿದರು.
ಮಂಗಳವಾರ ನಡೆದ ಫೆಡರೇಶನ್ ನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಫೆಡರೇಶನ್ ವತಿಯಿಂದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಮೀನುಗಾರಿಕೆ ಕಾಲೇಜಿನಲ್ಲಿ ಮೀನುಗಾರಿಕೆ ಬಗ್ಗೆ ವ್ಯಾಸಂಗ ಮಾಡುವ ಸದಸ್ಯರ ಮಕ್ಕಳ ದತ್ತು ಸ್ವೀಕಾರ, ಸದಸ್ಯರಿಗೆ ಆರೋಗ್ಯ ಕಾರ್ಡು ಸೌಲಭ್ಯ, ಸದಸ್ಯ ಸಹಕಾರಿ ಸಂಘಗಳ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಾಗಾರ, ಮೀನುಗಾರಿಕೆ ಮತ್ತು ಮೀನು ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ ನೀಡುವ ಉದ್ದೇಶದಿಂದ ಮತ್ಸ್ಯ ಮೇಳ ಆಯೋಜನೆ, ಸದಸ್ಯರಿಗೆ ಫೆಡರೇಶನ್ ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ ಏರ್ಪಡಿಸುವುದು, ಕಾಪು ಮತ್ತು ಹಂಗಾರಕಟ್ಟೆ ಕೇಂದ್ರಗಳಲ್ಲಿ ನೂತನವಾಗಿ ಬ್ಯಾಂಕಿಂಗ್ ವಿಭಾಗ ತೆರೆಯುವುದು, ಕೇಂದ್ರ ಸರಕಾರದ ಆತ್ಮನಿರ್ಭರ ಭಾರತದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಮತ್ತು ಸದಸ್ಯ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡು ಒದಗಿಸುವ ಬಗ್ಗೆ ಯೋಜನೆ ರೂಪಿಸಲಾಗಿದ್ದು, ಆಯ್ದ ಕೇಂದ್ರಗಳಲ್ಲಿ ಫೆಡರೇಶನ್ ವತಿಯಿಂದ ಮತ್ಸ್ಯ ಕ್ಯಾಂಟಿನ್ ಆರಂಭಿಸುವ ಬಗ್ಗೆ ನಿರ್ಧರಿಸಲಾಗಿದೆ ಎಂದರು.
ಮಹಾಸಭೆಯಲ್ಲಿ 44 ಮಂದಿ ಬಿ ವರ್ಗ ಮತ್ತು 624 ಮಂದಿ ಸಿ ವರ್ಗದ ಸದಸ್ಯರು ಮತ್ತು ಸರಕಾರದ ಪ್ರತಿನಿಧಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ನಿತಿನ್ ಕುಮಾರ್ ಮತ್ತು ತುಳು ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯೋಗೀಶ ಕಾಂಚನ್ ಬೈಕಂಪಾಡಿ ಹಾಗೂ ಫೆಡರೇಶನ್ ನಲ್ಲಿ ಅನೇಕ ವರ್ಷ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಜನಾರ್ದನ ಮತ್ತು ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!